ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಎನ್ ಕೌಂಟರ್, ಮೂವರು ಉಗ್ರರ ಹತ್ಯೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರಗಳು
ಸಾಂದರ್ಭಿಕ ಚಿತ್ರಗಳು

ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಮಾಹಿತಿ  ತಿಳಿದು ಬಾರಾಮುಲ್ಲಾ ಜಿಲ್ಲೆಯ ಬಿನ್ನರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದವು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಶೋಧ ಕಾರ್ಯಚಾರಣೆ ವೇಳೆಯಲ್ಲಿ  ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ನಂತರ ಭದ್ರತಾ ಪಡೆಗಳು  ಪ್ರತಿ ದಾಳಿ ನಡೆಸಿವೆ.  ಕಾರ್ಯಾಚರಣೆ ವೇಳೆಯಲ್ಲಿ ಮೂವರು ಉಗ್ರರು ಹತರಾಗಿರುವುದಾಗಿ ಅವರು ತಿಳಿಸಿದ್ದಾರೆ.

ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಇನ್ನಿತರ  ಅಪರಾಧ ಕೃತ್ಯಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com