ಏಕಾಂಗಿಯಾಗಿ ನಿಭಾಯಿಸಲು ಸಾಧ್ಯವಾಗದೇ ರಾಹುಲ್ ಸಹೋದರಿ ನೆರವು ಕೋರಿದ್ದಾರೆ: ಸುಮಿತ್ರಾ ಮಹಾಜನ್

ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಎಂಟ್ರಿ ಸಂಬಂಧ ಪ್ರತಿಕ್ರಿಯಿಸಿರುವ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಎಐಸಿಸಿ ಅಧ್ಯಕ್ಷ ರಾಹುಲ್ ....
ಪ್ರಿಯಾಂಕಾ ಗಾಂಧಿ ಮತ್ತು ಸುಮಿತ್ರಾ ಮಹಾಜನ್
ಪ್ರಿಯಾಂಕಾ ಗಾಂಧಿ ಮತ್ತು ಸುಮಿತ್ರಾ ಮಹಾಜನ್
ಇಂದೋರ್: ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಎಂಟ್ರಿ ಸಂಬಂಧ ಪ್ರತಿಕ್ರಿಯಿಸಿರುವ  ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಏಕಾಂಗಿಯಾಗಿ ರಾಜಕೀಯ ನಿಭಾಯಿಸಲು ಸಾಧ್ಯವಾಗದೇ ಸಹೋದರಿಯ ನೆರವು ಕೋರಿದ್ದಾರೆ ಎಂದು ಹೇಳಿದ್ದಾರೆ,
ಇಂದೋರ್ ನಲ್ಲಿ ಮಾತನಾಡಿದ ಅವರು, ಪ್ರತಿಭಾವಂತ ವ್ಯಕ್ತಿಗಳಿಗೆ ಅವಕಾಶ ಸಿಗಬೇಕು, ಅಂಥವರು ಮುಂದೆ ಬರಬೇಕು ಎಂದು ಹೇಳಿದ್ದಾರೆ.
ಬಿಜೆಪಿ ಹಿರಿಯ ನಾಯಕಿ ಸುಮಿತ್ರಾ ಮಹಾಜನ್ 1989 ರಿಂದ ಇಂದೋರ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ, 
ಹಲವು ವರ್ಷಗಳ ನಿರೀಕ್ಷೆಯ ಬಳಿಕ ಕೊನೆಗೂ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕೀಯಕ್ಕೆ ಆಗಮಿಸಿದ್ದಾರೆ, ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಕಾಂಗ್ರೆಸ್ ಪ್ರಿಯಾಂಕಾರನ್ನು ಉತ್ತರ ಪ್ರದೇಶ ಪೂರ್ವ ವಿಭಾಗದ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದಾರೆ. 
ಕಾಂಗ್ರೆಸ್ ನ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಲು ನನಗೆ ಆಸಕ್ತಿಯಿಲ್ಲ, ಅದು ಅವರ ವಿವೇಚನೆಗೆ ಬಿಟ್ಟದ್ದು, ಆದರೆ ನನ್ನ ಪ್ರಕಾರ ನಾಯಕತ್ವ ಗುಣ ಸಾಮರ್ಥ್ಯ ಇದ್ದವರು ರಾಜಕೀಯದಲ್ಲಿ ಮುಂಚೂಣಿಗೆ ಬರಬೇಕು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com