''ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೇ ಪ್ರಣಬ್ ಮುಖರ್ಜಿಗೆ ಭಾರತ ರತ್ನ'

ಬಿಜೆಪಿ ಮಾತೃಸಂಸ್ಥೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕಾಗಿಯೇ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಬಿಜೆಪಿ ಮಾತೃಸಂಸ್ಥೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕಾಗಿಯೇ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಡ್ಯಾನಿಶ್ ಅಲಿ ಅವರು ಶುಕ್ರವಾರ ಇಂತಹುದೊಂದು ಹೇಳಿಕೆ ನೀಡಿದ್ದು, ನಾಗಪುರದಲ್ಲಿ ನಡೆದಿದ್ದ ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿಯಾಗಿದ್ದು ಮಾತ್ರವಲ್ಲದೇ ಆರ್ ಎಸ್ಎಸ್ ಸಂಸ್ಥಾಪಕ ಕೆ ಬಿ ಹೆಡ್ಗೆವಾರ್ ರನ್ನು ಮಣ್ಣಿನ ಮಗ ಎಂದು ಹೊಗಳಿದ್ದರು. ಪ್ರಣಬ್ ಅವರ ಹೊಗಳಿಕೆಯಿಂದಾಗಿ ಕೇಂದ್ರ ಸರ್ಕಾರ ಸಂತುಷ್ಟಗೊಂಡು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಘೋಷಣೆ ಮಾಡದ ಕೇಂದ್ರ ಸರ್ಕಾರದ ವಿರುದ್ಧವೂ ಕಿಡಿಕಾರಿದ ಡ್ಯಾನಿಷ್ ಅಲಿ ಅವರು, 111 ವರ್ಷಗಳ ಕಾಲ ಬದುಕಿ, ಬದುಕಿದ್ದ ಕೊನೆಯ ಕ್ಷಣದವರೆಗೂ ತ್ರಿವಿಧ ದಾಸೋಹ ಮಾಡಿದ್ದ ಶಿವಕುಮಾರಸ್ವಾಮಿಜಿಗಳನ್ನು ಭಾರತ ರತ್ನಕ್ಕೆ ಆಯ್ಕೆ ಮಾಡಿದಿರುವುದು ಸರ್ಕಾರದ ದುರ್ನಡತೆ ಎಂದು ಟೀಕಿಸಿದ್ದಾರೆ. ಅಂತೆಯೇ ಪ್ರಸ್ತುತ ಭಾರತ ರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವ ಭೂಪೇನ್ ಹಜಾರಿಕಾ, ನಾನಾಜಿ ದೇಶ್ ಮುಖ್ ಮತ್ತು ಪ್ರಣಬ್ ಮುಖರ್ಜಿ ಅವರ ಸೇವೆಗಳಿಗಿಂತಲೂ ಶಿವಕುಮಾರ ಸ್ವಾಮಿಜಿಗಳ ಸೇವೆ ಅಮೌಲ್ಯವಾದದ್ದು ಎಂದು ಡ್ಯಾನಿಷ್ ಅಲಿ ಹೇಳಿದ್ದಾರೆ.
ಅಂತೆಯೇ ಕೇಂದ್ರ ಸರ್ಕಾರದ ಈ ದುರ್ನಡತೆಗೆ ಮುಂಬರುವ ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಜನತೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com