ಪ್ರಿಯಾಂಕ ಗಾಂಧಿ
ಪ್ರಿಯಾಂಕ ಗಾಂಧಿ

ಕುಂಭಮೇಳದಲ್ಲಿ ಪವಿತ್ರ ಸ್ನಾನದ ಬಳಿಕ: ರಾಜಕೀಯ ಚಟುವಟಿಕೆಗಳಿಗೆ ಪ್ರಿಯಾಂಕ ಗಾಂಧಿ ಅಧಿಕೃತ ಚಾಲನೆ

ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಿರುವ ಪ್ರಿಯಾಂಕ ಗಾಂಧಿ, ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ತಮ್ಮ ರಾಜಕೀಯ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ.
ನವದೆಹಲಿ: ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಿರುವ ಪ್ರಿಯಾಂಕ ಗಾಂಧಿ, ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ತಮ್ಮ ರಾಜಕೀಯ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. 
ಫೆ.04 ರಂದು ಪ್ರಿಯಾಂಕ ಗಾಂಧಿ ಕುಂಭಮೇಳದಲ್ಲಿ ಭಾಗವಹಿಸಲಿದ್ದು, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಕೆಲವೇ ದಿನಗಳ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪ್ರಿಯಾಂಕ ಗಾಂಧಿ, ಉತ್ತರ ಪ್ರದೇಶದ ಪೂರ್ವ ಭಾಗದ  ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು. ಈಗ ಫೆ.04 ರಂದು ರಾಹುಲ್ ಗಾಂಧಿ ಜೊತೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 
ಒಂದು ವೇಳೆ ಫೆ.4 ರಂದು ಪವಿತ್ರ ಸ್ನಾನ ಮಾಡುವುದಕ್ಕೆ ಅವಕಾಶ ಸಿಗದೇ ಇದ್ದಲ್ಲಿ, ಫೆ.10 ರಂದು ವಸಂತ ಪಂಚಮಿಯಂದು ಪವಿತ್ರ ಸ್ನಾನ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. 2001 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕುಂಭಮೇಳದಲ್ಲಿ ಭಾಗವಹಿಸಿ ಪವಿತ್ರ ಸ್ನಾನ ಮಾಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com