ಮಹಾರಾಷ್ಟ್ರ: ಲೋಕಸಭೆ,ಆಸೆಂಬ್ಲಿಗೆ ಏಕಕಾಲದಲ್ಲಿ ಚುನಾವಣೆ ಇಲ್ಲ- ಪಡ್ನವೀಸ್

ಮಹಾರಾಷ್ಟ್ರದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಯುವ ಸಾಧ್ಯತೆ ಇಲ್ಲ ಎಂದು ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ಹೇಳಿದ್ದಾರೆ.

Published: 31st January 2019 12:00 PM  |   Last Updated: 31st January 2019 07:01 AM   |  A+A-


CM Devendra Fadnavis

ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್

Posted By : ABN ABN
Source : PTI
ಮುಂಬೈ: ಮಹಾರಾಷ್ಟ್ರದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಯುವ ಸಾಧ್ಯತೆ ಇಲ್ಲ ಎಂದು ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ಹೇಳಿದ್ದಾರೆ.

ಆದಾಗ್ಯೂ, ಶಿವಸೇನೆಯೊಂದಿಗೆ ಬಿಜೆಪಿ ಮೈತ್ರಿ ಇಷ್ಟವಿಲ್ಲದ ಹಿನ್ನೆಲೆಯಲ್ಲಿ ಪಡ್ನವೀಸ್ ಈ ರೀತಿಯಲ್ಲಿ ಹೇಳಿಕೆ ನೀಡಿರಬಹುದೆಂದು  ಕಾಂಗ್ರೆಸ್ ಹೇಳಿಕೆ ನೀಡಿದೆ.

ಲೋಕಸಭಾ ಚುನಾವಣೆಗೂ ಮುಂಚಿತವಾಗಿ ರಾಜ್ಯ ವಿಧಾನಸಭಾ ಚುನಾವಣೆ ನಡೆಸುವ ಯಾವುದೇ ಪ್ರಸ್ತಾಪವೂ ಇಲ್ಲ ಎಂದು  ಪಡ್ನವೀಸ್ ಹೇಳಿದ್ದಾರೆ.

ನವೆಂಬರ್ ಅಂತ್ಯದಲ್ಲಿ ಮಹಾರಾಷ್ಟ್ರ ಆಸೆಂಬ್ಲಿ ಅವಧಿ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಏಪ್ರಿಲ್- ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆಯೂ ಹೆಚ್ಚಾಗಿದೆ.

ಬಿಜೆಪಿ ಮೈತ್ರಿ ಪಕ್ಷ ಶಿವಸೇನಾಕ್ಕೆ ಶರಣಾಗಿದೆ. ಒಂದು ವೇಳೆ ಮೈತ್ರಿ ಸಾಧ್ಯವಾದರೆ  ಲೋಕಸಭೆ ಹಾಗೂ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸಲಿದೆ ಎಂದು ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಹೇಳಿದ್ದಾರೆ.

ಶಿವಸೇನೆ ಮೈತ್ರಿಯೊಂದಿಗೆ ಲೋಕಸಭೆ ಹಾಗೂ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವಕ್ಕೆ ಪಡ್ನವೀಸ್ ಗೆ ಇಷ್ಟ ಇಲ್ಲ ಎಂಬುದು ನಮಗೆ ಗೊತ್ತಿದೆ. ಸಭೆಯಲ್ಲಿ ಮಾತುಕತೆ ನಡೆಸಲಾಗುವುದು  ಮತ್ತು ಆಸೆಂಬ್ಲಿ ಚುನಾವಣೆಗೆ ಸಿದ್ಧತೆ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನರೇಂದ್ರ ಮೋದಿ ಏಕಕಾಲದಲ್ಲಿ ಚುನಾವಣೆ ನಡೆಸುವ ಪರವಾಗಿದ್ದಾರೆ. ಆದ್ದರಿಂದಾಗಿ ಲೋಕಸಭಾ ಚುನಾವಣೆ ಜೊತೆಯಲ್ಲಿಯೇ ವಿಧಾನಸಭಾ ಚುನಾವಣೆ ನಡೆಸಲು ಸರ್ಕಾರ  ಹೇಳಿಕೆ ನೀಡಿದೆ ಎಂದು ಎನ್ ಸಿಪಿ ವಕ್ತಾರ ನವಾಜ್ ಮಲ್ಲಿಕ್ ಹೇಳಿದ್ದಾರೆ.

ನಿರುಪಮ್ ಹೇಳಿಕೆಯನ್ನು ಶಿವಸೇನಾ ವಕ್ತಾರ ಮನೀಷ್ ಕಾಯಂಡೇ ನಿರಾಕರಿಸಿದ್ದು, ಪಕ್ಷದ ಮುಖ್ಯಸ್ಥ ಉದ್ದವ್ ಠಾಕ್ರೆ ನಿರ್ಧಾರದಂತೆ ಮುಂದುವರೆಯುತ್ತೇವೆ. ನಿರುಪಮ್  ನಮ್ಮ ಪಕ್ಷದ ಬಗ್ಗೆ ಟೀಕೆ ಮಾಡಬಾರದು. ಕಾಂಗ್ರೆಸ್ ಪಕ್ಷದಲ್ಲಿ ನಿರುಪಮ್ ಅಸ್ತಿತ್ವದ ಬಗ್ಗೆ ಅನುಮಾನ ಇದೆ ಎಂದು ಟೀಕಿಸಿದ್ದಾರೆ.
Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp