ಮಹಾರಾಷ್ಟ್ರ: ಶಾಲಾ ಮಕ್ಕಳ ಬಿಸಿಯೂಟದಲ್ಲಿ ಸತ್ತ ಹಾವು ಪತ್ತೆ

ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಡಿಸಲಾದ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವು ಪತ್ತೆಯಾಗಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನಾಂದೇಡ್‌: ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಡಿಸಲಾದ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವು ಪತ್ತೆಯಾಗಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ನಾಂದೇಡ್‌ ಜಿಲ್ಲೆಯ ಗರ್ಗವಾನ್‌ ಜಿಲ್ಲಾ ಪರಿಷತ್‌ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಈ ಶಾಲೆಯಲ್ಲಿ 1 ರಿಂದ 5ನೇ ತರಗತಿ ವರೆಗಿನ 80 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 
ಶಾಲಾ ಸಿಬ್ಬಂದಿ ಮಧ್ಯಾಹ್ನದ ಊಟ ಬಡಿಸಲು ಶುರು ಮಾಡುತ್ತಿದ್ದಂತೆ ಅವರಿಗೆ ಕಿಚಡಿಯಲ್ಲಿ ಹಾವು ಕಂಡು ಬಂದಿದೆ. ಹೀಗಾಗಿ ಯಾವುದೇ ವಿದ್ಯಾರ್ಥಿಗಳಿಗೆ ಇದನ್ನ ನೀಡಿಲ್ಲ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ನಾಂದೇಡ್​ ಜಿಲ್ಲಾ ಶಿಕ್ಷಣಾಧಿಕಾರಿ ಪ್ರಶಾಂತ್​ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದಾರೆ. ಜತಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರು ಮಾಡುತ್ತಿರುವುದು ಒಂದು ಸರ್ಕಾರೇತರ ಸಂಸ್ಥೆಯಾಗಿದ್ದು, ಅದರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com