ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ 6 ತಿಂಗಳ ಕಾಲ ರಾಷ್ಟ್ರಪತಿ ಆಡಳಿತ ಮುಂದುವರಿಕೆ, ರಾಜ್ಯಸಭೆ ಅನುಮೋದನೆ

ನಿರೀಕ್ಷೆಯಂತೆಯೇ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಮತ್ತೆ ಆರು ತಿಂಗಳ ಕಾಲ ಮುಂದುವರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ.
ನವದೆಹಲಿ: ನಿರೀಕ್ಷೆಯಂತೆಯೇ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಮತ್ತೆ ಆರು ತಿಂಗಳ ಕಾಲ ಮುಂದುವರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ.
ಸಂಸತ್ ಭವನದಲ್ಲಿ ಜಮ್ಮು ಮತ್ತು ಕಾಶ್ಮೀರ ಕುರಿತ ವಿಚಾರ ಭಾರಿ ಚರ್ಚೆ ಮತ್ತು ಕೋಲಾಹಲಕ್ಕೆ ಕಾರಣವಾಗಿರುವಂತೆಯೇ ಕೇಂದ್ರ ಗೃಹ ಇಲಾಖೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಮತ್ತೆ ಆರು ತಿಂಗಳ ಕಾಲ ಮುಂದುವರಿಸುವ ಪ್ರಸ್ತಾಪ ಮಂಡಿಸಿತ್ತು. ಇದಕ್ಕೆ ರಾಜ್ಯಸಭೆ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತದ ಇನ್ನೂ ಆರು ತಿಂಗಳು ವಿಸ್ತರಣೆ ಮಾಡಬೇಕೆಂದು ಪ್ರಸ್ತಾಪಿಸಿದರು. ಇದಕ್ಕೆ ಈಗ ಲೋಕಸಭೆಯೂ ಸಮ್ಮತಿ ನೀಡಿತ್ತು. ಈ ವರ್ಷದ ಅಂತ್ಯದ ವೇಳೆಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ರಾಷ್ಟ್ರಪತಿ ಆಡಳಿತ ಇರಲಿದೆ ಎಂದು ಶಾ ಹೇಳಿದರು.
'ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಅಸ್ತಿತ್ವದಲ್ಲಿಲ್ಲ. ಹೀಗಾಗಿ ನಾನು ರಾಷ್ಟ್ರಪತಿ ಆಡಳಿತ ಮತ್ತೆ ಆರು ತಿಂಗಳವರೆಗೆ ವಿಸ್ತರಿಸುವ ಮಸೂದೆ ತಂದಿದ್ದೇನೆ. ಚುನಾವಣಾ ಆಯೋಗವು ಕೇಂದ್ರ ಮತ್ತು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಿದೆ. ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಸಲು ಸಾಧ್ಯವಿದೆ ಎಂದು ನಿರ್ಧರಿಸಿದೆ ಎಂದು ಶಾ ಪ್ರಸ್ತಾಪಿಸಿದರು.

Related Stories

No stories found.

Advertisement

X
Kannada Prabha
www.kannadaprabha.com