ರತ್ನಗಿರಿಯ ತಿವಾರೆ ಅಣೆಕಟ್ಟಿನಲ್ಲಿ ಬಿರುಕು: ಗ್ರಾಮಸ್ಥರು ನೀಡಿದ್ದ ಎಚ್ಚರಿಕೆ ನಿರ್ಲಕ್ಷಿಸಿದ ಸರ್ಕಾರ

ಮಹಾರಾಷ್ಟ್ರದಲ್ಲಿನ ಧಾರಾಕಾರ ಮಳೆಗೆ ರತ್ನಗಿರಿ ಜಿಲ್ಲೆಯಲ್ಲಿರುವ ತಿವಾರೆ ಅಣೆಕಟ್ಟು ಒಡೆದು ...
ತಿವಾರೆ ಅಣೆಕಟ್ಟು ಒಡೆದು ನೀರು ಹೊರಬಂದಿರುವುದು
ತಿವಾರೆ ಅಣೆಕಟ್ಟು ಒಡೆದು ನೀರು ಹೊರಬಂದಿರುವುದು
ರತ್ನಗಿರಿ(ಮುಂಬೈ): ಮಹಾರಾಷ್ಟ್ರದಲ್ಲಿನ ಧಾರಾಕಾರ ಮಳೆಗೆ ರತ್ನಗಿರಿ ಜಿಲ್ಲೆಯಲ್ಲಿರುವ ತಿವಾರೆ ಅಣೆಕಟ್ಟು ಒಡೆದು ನೀರು ಹೊರಬಂದು ಸುತ್ತಮುತ್ತಲ ಪರಿಸ್ಥಿತಿ ಬಿಗಡಾಯಿಸಿದೆ. 
ಅಣೆಕಟ್ಟೆಯಲ್ಲಿ ಬಿರುಕು ಉಂಟಾಗಿದ್ದು ದುರಸ್ತಿ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರೂ ಸಹ ನಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿತ್ತು. ಯಾವುದೇ ಮುಂಜಾಗ್ರತೆ ಕ್ರಮ ಕೈಗೊಂಡಿರಲಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಾರೆ. 
ತಿವಾರೆ ಅಣೆಕಟ್ಟಿನ ಸುತ್ತಮುತ್ತಲ ಪ್ರದೇಶದ ಗ್ರಾಮಸ್ಥರು ಅಣೆಕಟ್ಟೆಯಲ್ಲಿ ಬಿರುಕು ಉಂಟಾಗಿದ್ದ ಬಗ್ಗೆ ದೂರು ನೀಡಿದ್ದರು ಎಂದು ಮಹಾರಾಷ್ಟ್ರ ನೀರಾವರಿ ಸಚಿವ ಗಿರೀಶ್ ಮಹಾಜನ್ ಒಪ್ಪಿಕೊಂಡಿದ್ದಾರೆ.
ಮಹಾರಾಷ್ಟ್ರದ ಕರಾವಳಿಯ ಕೊಂಕಣ್ ಪ್ರದೇಶದಲ್ಲಿರುವ ತಿವಾರೆ ಅಣೆಕಟ್ಟು ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನೆರೆ ಪ್ರವಾಹದಿಂದ ಒಡೆದು ಕೊಚ್ಚಿ ಹೋಗಿ ಉಂಟಾಗಿ ಕನಿಷ್ಠ 6 ಮಂದಿ ಮೃತಪಟ್ಟು 19 ಜನ ಕಣ್ಮರೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಣೆಕಟ್ಟು ಒಡೆದು ಹೋಗಿರುವುದರಿಂದ ತಗ್ಗು ಪ್ರದೇಶದಲ್ಲಿರುವ ಏಳು ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ 12 ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠ ವಿಶಾಲ್ ಗಾಯಕ್ ವಾಡ್ ತಿಳಿಸಿದ್ದಾರೆ.
ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಸಾಧ್ಯವಾದಷ್ಟು ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಕ್ಕೆ ವರ್ಗಾಯಿಸಿದ್ದಾರೆ. ಪರಿಸ್ಥಿತಿ ಈಗ ಅಲ್ಲಿ ನಿಯಂತ್ರಣದಲ್ಲಿದೆ. 
ಕಳೆದ ರಾತ್ರಿ ಅಣೆಕಟ್ಟು ಒಡೆದು ಹೋಗಿದ್ದರಿಂದ ಕತ್ತಲಿನಲ್ಲಿ ರಕ್ಷಣಾ ಕಾರ್ಯಕ್ಕೆ ಅಡಚಣೆಯುಂಟಾಯಿತು ಎಂದು ಪೊಲೀಸರು ಹೇಳುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com