ಹರೇನ್ ಪಾಂಡ್ಯ ಹತ್ಯೆ ಪ್ರಕರಣ: 12 ಮಂದಿಗೆ ಜೀವಾವಧಿ, ಕೆಳ ನ್ಯಾಯಾಲಯದ ತೀರ್ಪು ಎತ್ತಿಹಿಡಿದ ಸುಪ್ರೀಂ

ಗುಜರಾತ್ ಮಾಜಿ ಗೃಹ ಸಚಿವ ಹರೇನ್ ಪಾಂಡ್ಯ ಕೊಲೆ ಪ್ರಕರಣದಲ್ಲಿ 12 ಆರೋಪಿಗಳನ್ನು ಶಿಕ್ಷೆಗೊಳಪಡಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ
ನವದೆಹಲಿ: ಗುಜರಾತ್ ಮಾಜಿ ಗೃಹ ಸಚಿವ ಹರೇನ್ ಪಾಂಡ್ಯ ಕೊಲೆ ಪ್ರಕರಣದಲ್ಲಿ 12 ಆರೋಪಿಗಳನ್ನು ಶಿಕ್ಷೆಗೊಳಪಡಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ  ಇದೇ ವೇಳೆ ಕರಣದ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸುವ ಗುಜರಾತ್ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ತೀರ್ಪು ಪ್ರಕಟಿಸಿದೆ. ಈ ಮುನ್ನ ಕೆಳ ನ್ಯಾಯಾಲಯ ಅವರಿಗೆ ಜೀವಾವಧಿ ಶಿಕ್ಷೆ ನೀಡಿತ್ತು.
ವಿಶೇಷ ಪಿಒಟಿಎ (ಭಯೋತ್ಪಾದಕ ಚಟುವಟಿಕೆಗಳ ತಡೆಗಟ್ಟುವಿಕೆ) ನ್ಯಾಯಾಲಯವು 2007 ರಲ್ಲಿ ಎಲ್ಲಾ 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.ಆದರೆ ಹೈಕೋರ್ಟ್ ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಎಲ್ಲರನ್ನೂ ಖುಲಾಸೆಗೊಳಿಸಿವಿ ಆದೇಶಿಸಿತ್ತು.
ಪಾಂಡ್ಯ ಹತ್ಯೆಯ ಬಗ್ಗೆ ಹೊಸದಾಗಿ ತನಿಖೆ ನಡೆಸಬೇಕೆಂದು ಕೋರಿ ಪ್ರಶಾಂತ್ ಭೂಷಣ್  ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿ ಪ್ರಕರಣದ ಬಗ್ಗೆ ಮರು ತನಿಖೆ ಅಗತ್ಯವಿಲ್ಲ ಎಂದು ಹೇಳಿದೆ.
ನರೇಂದ್ರ ಮೋದಿ ಗುಜರಾತಿನಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಹರೇನ್ ಪಾಂಡ್ಯ  ಅವರ ಸರ್ಕಾರದಲ್ಲಿ ಸಚಿವರಾಗಿದ್ದರು.ಮಾರ್ಚ್ 26, 2003 ರಂದು ಅಹಮದಾಬಾದ್ ನ ಸಮೀಪದ ಲಾ ಗಾರ್ಡನ್ ನಲ್ಲಿ ಬೆಳಗಿನ ವಾಕಿಂಗ್ ಮಾಡುವಾಗ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು ಹಾಕಿದ್ದರು.2002ರಲ್ಲಿ ಗುಜರಾತಿನಲ್ಲಿ ನಡೆದಿದ್ದ ಕೋಮು ಗಲಭೆಗೆ ಪ್ರತೀಕಾರ ತೀರಿಸಿಕೊಳ್ಳುವ ಸಲುವಾಗಿ ಈ ಹತ್ಯೆ ನಡೆದಿತ್ತೆಂದು ಸಿಬಿಐ ವಾದಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com