ಗುಜರಾತ್ ನಲ್ಲಿ 'ಕೈ'ಗೆ ಆಘಾತ: ಇಬ್ಬರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ

ಇತ್ತೀಚಿಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದ ಗುಜರಾತ್ ನ ಇಬ್ಬರು ಕಾಂಗ್ರೆಸ್ ಶಾಸಕರು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಅಹಮದಾಬಾದ್: ಇತ್ತೀಚಿಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದ ಗುಜರಾತ್ ನ ಇಬ್ಬರು ಕಾಂಗ್ರೆಸ್ ಶಾಸಕರು ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕರಾದ ಅಲ್ಫೆಶ್ ಠಾಕೂರ್ ಹಾಗೂ ಧವಲಿಸಿನ್ಹಾ ಝಲ ಅವರು ಇಂದು ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಠಾಕೂರ್ ಅವರು, ರಾಜ್ಯಸಭೆ ಚುನಾವಣೆಯಲ್ಲಿ ನಾನು ನನ್ನ ಮತವನ್ನು ಪ್ರಾಮಾಣಿಕ ರಾಷ್ಟ್ರೀಯ ನಾಯಕತ್ವಕ್ಕೆ ಹಾಕಿದ್ದಾನೆ ಮತ್ತು ಈ ವಿಚಾರದಲ್ಲಿ ನನ್ನ ಆತ್ಮಸಾಕ್ಷಿ ಹೇಳಿದಂತೆ ನಾನು ನಡೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ನನಗೆ ಮಾನಸಿಕ ಒತ್ತಡ ಬಿಟ್ಟು ಬೇರೆ ಏನೂ ಸಿಕ್ಕಿಲ್ಲ. ಈಗ ನಾನು ಸ್ವತಂತ್ರವಾಗಿದ್ದೇನೆ ಎಂದು ಠಾಕೂರ್ ಹೇಳಿದ್ದಾರೆ.
ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಒಬಿಸಿ ನಾಯಕ ಜುಗ್ಲಜಿ ಠಾಕೂರ್ ಅವರನ್ನು ಕಣಕ್ಕಿಳಿಸಿತ್ತು. ಅವರಿಗೆ ಪ್ರತಿ ಸ್ಪರ್ಧಿಯಾಗಿ ಕಾಂಗ್ರೆಸ್ ಚಂದ್ರಿಕಾ ಚುಡಸಮ ಮತ್ತು ಗೌರವ್ ಪಾಂಡ್ಯ ಅವರನ್ನು ಕಣಕ್ಕಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com