ಐದು ತಿಂಗಳ ನಾಪತ್ತೆ ಬಳಿಕ ತಿರುಪತಿ ರೈಲ್ವೆ ನಿಲ್ದಾಣದಲ್ಲಿ ಸಾಮಾಜಿಕ ಹೋರಾಟಗಾರ ಪ್ರತ್ಯಕ್ಷ

ಐದು ತಿಂಗಳುಗಳಿಂದ ನಾಪತ್ತೆಯಾಗಿದ್ದ ಸಾಮಾಜಿಕ ಕಾರ್ಯಕರ್ತ ಮುಗಿಲನ್ ತಿರುಪತಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ದಿನ ಪ್ರತ್ಯಕ್ಷರಾಗಿದ್ದಾರೆ. ಮುಗಿಲನ್ ಅವರನ್ನು ಕಟ್ಪಾಡಿಗೆ ಕರೆತರುವ ಬಗ್ಗೆ ಮಾಹಿತಿ ಬಂದಿದೆ ಎಂದು ಹಿರಿಯ ತಮಿಳುನಾಡು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಮಾಜಿಕ ಹೋರಾಟಗಾರ ಮುಗಿಲನ್
ಸಾಮಾಜಿಕ ಹೋರಾಟಗಾರ ಮುಗಿಲನ್
ಚೆನ್ನೈ: ಐದು ತಿಂಗಳುಗಳಿಂದ ನಾಪತ್ತೆಯಾಗಿದ್ದ ಸಾಮಾಜಿಕ ಕಾರ್ಯಕರ್ತ ಮುಗಿಲನ್ ತಿರುಪತಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ದಿನ ಪ್ರತ್ಯಕ್ಷರಾಗಿದ್ದಾರೆ. ಮುಗಿಲನ್ ಅವರನ್ನು ಕಟ್ಪಾಡಿಗೆ ಕರೆತರುವ ಬಗ್ಗೆ ಮಾಹಿತಿ ಬಂದಿದೆ ಎಂದು ಹಿರಿಯ ತಮಿಳುನಾಡು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಮಧ್ಯೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರುಪಡಿಸುವಾಗ  ಕುಂದಕೋಳಂ ಯೋಜನೆ ವಿರೋಧಿಸಿ ಮುಗಿಲನ್ ಘೋಷಣೆ ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈರೋಡ್ ಮೂಲದ ಸಾಮಾಜಿಕ ಹೋರಾಟಗಾರ ಮುಗಿಲನ್ , ಲೋಕೋಪಯೋಗಿ ಇಲಾಖೆಯಲ್ಲಿನ ಉದ್ಯೋಗಕ್ಕೆ 1996ಕ್ಕೆ ರಾಜೀನಾಮೆ ನೀಡಿ, ಭ್ರಷ್ಟಾಚಾರ ಹಾಗೂ ಪರಿಸರಕ್ಕೆ ಸಂಬಂಧಿಸಿದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. 23 ವರ್ಷಗಳಿಂದ ನಾನಾ ಕಾರಣಗಳಿಂದಾಗಿ ಹೋರಾಟ ನಡೆಸುತ್ತಾ ಬಂದಿರುವ ಮುಗಿಲನ್ ಗೆ ಹಲವು ಬಾರಿ ಜೀವ ಬೆದರಿಕೆ ಬಂದಿದ್ದು, ಅಕ್ರಮ ಬಂಧನದಿಂದ ಒಂದು ವರ್ಷ ಜೈಲುವಾಸ ಅನುಭವಿಸಿದ್ದಾರೆ.
ಕಳೆದ ವರ್ಷ ಮೇ 22 ರಂದು ತುತೂಕುಡಿಯಲ್ಲಿನ ಸ್ಟರ್ಲೈಟ್ ಕಂಪನಿ ವಿರುದ್ಧ ನಡೆದಿದ್ದ ಹಿಂಸಾಚಾರದ ವೇಳೆಯಲ್ಲಿ 13 ಜನ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಗಿಲನ್,  ಪ್ರತಿಭಟನಾಕಾರರು ಮೇಲಿನ ದಾಳಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿದ್ದರು. ನಂತರ ಎಗ್ಮೋರ್ ರೈಲ್ವೆ ನಿಲ್ದಾಣದಿಂದ ಮಂಗಳೂರು ಎಕ್ಸ್ ಪ್ರೆಸ್ ರೈಲಿಗೆ ಹತ್ತಿದ್ದರು.
 ಮುಗಿಲನ್ ನಾಪತ್ತೆ ಸಂಬಂಧ ಆತನ ಸ್ನೇಹಿತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ವಕೀಲ ಹೆನ್ರಿ ತಿಪಾಗ್ನೆ ಮದ್ರಾಸ್ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಇದರಿಂದಾಗಿ ಚೆನ್ನೈ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com