ಅಸ್ಸಾಂ: ವಿಷ ಪ್ರಸಾದ ಸೇವಿಸಿ 150 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಅಸ್ಸಾಂ ರಾಜ್ಯದ ಕಾಮರೂಪ ಜಿಲ್ಲೆಯಲ್ಲಿ ವಿಷ ಪ್ರಸಾದ ಸೇವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ 150 ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ

Published: 08th July 2019 12:00 PM  |   Last Updated: 08th July 2019 08:32 AM   |  A+A-


Casual Photo

ಸಾಂದರ್ಭಿಕ ಚಿತ್ರ

Posted By : ABN ABN
Source : The New Indian Express
ರಾಂಗೈ: ಅಸ್ಸಾಂ ರಾಜ್ಯದ ಕಾಮರೂಪ ಜಿಲ್ಲೆಯಲ್ಲಿ ವಿಷ ಪ್ರಸಾದ ಸೇವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ 150 ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಉತ್ತರ ಗುವಾಹಟಿ ಬಳಿ ಲೆಂಗಾ ಹಳ್ಳಿ ಬಳಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ನೀಡಿದ ಪ್ರಸಾದ ಸೇವಿಸಿದ ಬಳಿಕ ಈ ದುರ್ಘಟನೆ ನಡೆದಿದೆ ಎಂದು ಗ್ರಾಮದ ಮುಖ್ಯಸ್ಥರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸಾದ ಸೇವಿಸಿದ ಬಳಿಕ ಹೊಟ್ಟೆನೋವು, ವಾಂತಿ, ಬೇದಿ ಕಾಣಿಸಿಕೊಂಡಿದ್ದು, ಅಮಂಗಾನ್ ಸರ್ಕಾರಿ ಆಸ್ಪತ್ರೆಗೆ 150 ಮಂದಿಯನ್ನು ದಾಖಲಿಸಲಾಗಿದೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಗುವಾಹಟಿಯ  ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಯಲ್ಲಿರುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಎಚ್ಚರಿಕೆ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp