ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸುವಂತೆ ಬಿಜೆಪಿ ಸಂಸದರಿಗೆ ಮೋದಿ ಸೂಚನೆ

ಪ್ರತಿಯೊಂದು ಬೂತ್ ಮಟ್ಟದಲ್ಲಿ ದಕ್ಷ ನಾಗರಿಕರೊಂದಿಗೆ ಸಂಪರ್ಕ ಹಾಗೂ ಗ್ರಾಮೀಣ ಆರ್ಥಿಕತೆಯಲ್ಲಿ ಮಹಾತ್ಮ ಗಾಂಧಿ ವಿಚಾರಧಾರೆ ಹರಡುವ ನಿಟ್ಟಿನಲ್ಲಿ ಬಿಜೆಪಿಯ ಸಂಸದರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.
ನವದೆಹಲಿ: ಪ್ರತಿಯೊಂದು  ಬೂತ್ ಮಟ್ಟದಲ್ಲಿ ದಕ್ಷ  ನಾಗರಿಕರೊಂದಿಗೆ ಸಂಪರ್ಕ ಹಾಗೂ ಗ್ರಾಮೀಣ ಆರ್ಥಿಕತೆಯಲ್ಲಿ ಮಹಾತ್ಮ ಗಾಂಧಿ ವಿಚಾರಧಾರೆ ಹರಡುವ ನಿಟ್ಟಿನಲ್ಲಿ ಬಿಜೆಪಿಯ ಸಂಸದರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.
 ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿಂದು ಬಿಜೆಪಿ ಸಂಸದೀಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್ 2ರ  ಗಾಂಧಿ ಜಯಂತಿ ಹಾಗೂ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವ ಆಕ್ಟೋಬರ್ 31 ರ ನಡುವೆ ಪಾದಯಾತ್ರೆ ಹಮ್ಮಿಕೊಳ್ಳುವಂತೆ ಹೇಳಿದರು. 
ಮಹಾತ್ಮ ಗಾಂಧಿ ಅವರ 150 ಜನ್ಮ ಜಯಂತಿ ಅತ್ಯಂತ ಪ್ರಮುಖ ಕಾರ್ಯಕ್ರಮವಾಗಿದ್ದು, ಅಕ್ಟೋಬರ್ 2 ರಿಂದ ಅಕ್ಟೋಬರ್ 31 ರ ನಡುವೆ 150 ಕಿಲೋ ಮೀಟರ್ ದೂರದವರೆಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸುವಂತೆ ಪ್ರದಾನಿ ಮೋದಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ ಎಂದು ಸಭೆಯ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯಸಭಾ ಸದಸ್ಯರಿಗೆ ಕ್ಷೇತ್ರವನ್ನು ಹಂಚಿಕೆ ಮಾಡುವುದಾಗಿ ಮೋದಿ ಹೇಳಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲೂ ಕನಿಷ್ಠ 15ರಿಂದ 20 ತಂಡಗಳನ್ನು ರಚಿಸಬೇಕು. ಅವರ ನೇತೃತ್ವದಲ್ಲಿ ಪ್ರತಿದಿನ 15 ಕಿಲೋ ಮೀಟರ್ ಪಾದಯಾತ್ರೆ ನಡೆಸಬೇಕು. ಗಾಂಧಿಜೀ ಅವರ ಸ್ವಾತಂತ್ರ್ಯ ಹೋರಾಟ  ಹಾಗೂ ಸಸಿ ನಡೆಯುವ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಹೇಳಿದರು.
ಮಹಾತ್ಮ ಗಾಂಧಿ ಅವರ ಸಂದೇಶಗಳನ್ನು ಹರಡಲು ಅವರ 150 ನೇ ಜನ್ಮಾಚರಣೆ ಕಾರ್ಯಕ್ರಮವನ್ನು ಒಂದು ಸದಾವಶಕಾಶವಾಗಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ. ಬಜೆಟ್ ನ ಉತ್ತಮ ಅಂಶಗಳನ್ನು ಜನರಿಗೆ ತಲುಪಿಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com