ರಾಷ್ಟ್ರ ರಾಜಧಾನಿಯಲ್ಲಿ ರಾಜ್ ಠಾಕ್ರೆ- ಸೋನಿಯಾ ಗಾಂಧಿ ಭೇಟಿ, ನಡೆದ ಮಾತುಕತೆ ಏನು ಗೊತ್ತೇ?

ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ್‌ ಸೇನಾದ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿರುವ ಅವರ ನಿವಾಸದಲ್ಲಿ

Published: 09th July 2019 12:00 PM  |   Last Updated: 09th July 2019 09:36 AM   |  A+A-


Raj Thackeray-Sonia Gandhi

ರಾಜ್ ಠಾಕ್ರೆ-ಸೋನಿಯಾ ಗಾಂಧಿ

Posted By : SBV SBV
Source : UNI
ನವದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ್‌ ಸೇನಾದ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ರಾಷ್ಟ್ರ ರಾಜಧಾನಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು. 

ಪಕ್ಷದ ಮೂಲಗಳ ಪ್ರಕಾರ, ಉಭಯ ನಾಯಕರು ಎಲೆಕ್ಟ್ರಾನಿಕ್ ಮತದಾನ ಯಂತ್ರಗಳ ವಿಷಯ ಸೇರಿದಂತೆ ಪ್ರಮುಖ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. 

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ ಬದಲಿಗೆ ಕಾಗದದ ಮತಪತ್ರವನ್ನು ಪುನಃ ಪರಿಚಯಿಸುವಂತೆ ಒತ್ತಾಯಿಸಲು ಚುನಾವಣಾ ಆಯೋಗವನ್ನು ಭೇಟಿ ಮಾಡಲು ಠಾಕ್ರೆ ರಾಷ್ಟ್ರ ರಾಜಧಾನಿಯಲ್ಲಿದ್ದರು. 
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp