ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಕರ್ನಾಟಕ ರಾಜಕೀಯ: ಕಲಾಪ ಮುಂದೂಡಿಕೆ

ರಾಜ್ಯ ರಾಜಕೀಯ ಬಿಕ್ಕಟ್ಟು ದೆಹಲಿಯಲ್ಲಿ ಪ್ರತಿಧ್ವನಿಸಿದೆ. ಕರ್ನಾಟಕದಲ್ಲಿನ ರಾಜಕೀಯ ಅಸ್ಥಿರತೆ ಕುರಿತು ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್‌ ...

Published: 10th July 2019 12:00 PM  |   Last Updated: 10th July 2019 02:55 AM   |  A+A-


Rajyasbhe (File  Image)

ರಾಜ್ಯಸಭೆ( ಸಂಗ್ರಹ ಚಿತ್ರ)

Posted By : SD SD
Source : PTI
ದೆಹಲಿ:  ರಾಜ್ಯ ರಾಜಕೀಯ ಬಿಕ್ಕಟ್ಟು ದೆಹಲಿಯಲ್ಲಿ ಪ್ರತಿಧ್ವನಿಸಿದೆ. ಕರ್ನಾಟಕದಲ್ಲಿನ ರಾಜಕೀಯ ಅಸ್ಥಿರತೆ ಕುರಿತು ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್‌ ಸದಸ್ಯರು  ರಾಜ್ಯಸಭೆಯಲ್ಲಿ ಆಗ್ರಹಿಸಿದರು. 

ಆದರೆ ಇದಕ್ಕೆ ಅವಕಾಶ ದೊರೆಯದ ಕಾರಣ ಸದನದ ಮುಂಭಾಗ ಸದಸ್ಯರು ಆಗಮಿಸಿ ಪ್ರತಿಭಟಿಸಿದರು. ಆಗ ಕಲಾಪವನ್ನು ಮುಂದೂಡಲಾಯಿತು. 

ಬಿಜೆಪಿ ಕುದುರೆ ವ್ಯಾಪಾರ ರಾಜಕಾರಣಕ್ಕೆ ಮುಂದಾಗಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸಂಸದರು ಸಭಾತ್ಯಾಗ ನಡೆಸಿದರು. 

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಷಿ, ಕರ್ನಾಟಕದಲ್ಲಿರುವ ಸರಕಾರದ ವಿರುದ್ಧ ಅದರದೇ ಪಕ್ಷದ ಶಾಸಕರಿಗೆ ನಂಬಿಕೆ ಇಲ್ಲ. ಹೀಗಾಗಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರು ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇದರಲ್ಲಿ ಬಿಜೆಪಿಯ ಪಾತ್ರ ಇಲ್ಲ.ಎಂದು ಸ್ಪಷ್ಟ ಪಡಿಸಿದ್ರು,
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp