ಸೆಪ್ಟೆಂಬರ್ ತಿಂಗಳಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ, ಪ್ರಧಾನಿ ಮೋದಿ ಭಾಗಿ ಸಾಧ್ಯತೆ

ಸೆಪ್ಟೆಂಬರ್ ತಿಂಗಳಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ಸಾಧ್ಯತೆ ಇದೆ. ಈ ಪ್ರವಾಸದ ವೇಳೆಯಲ್ಲಿ ಹೌಸ್ಟಾನ್ ನಲ್ಲಿರುವ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮೋದಿ ಭಾಷಣ ಮಾಡುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
ನವದೆಹಲಿ : ಸೆಪ್ಟೆಂಬರ್ ತಿಂಗಳಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ಸಾಧ್ಯತೆ ಇದೆ. ಈ ಪ್ರವಾಸದ ವೇಳೆಯಲ್ಲಿ ಹೌಸ್ಟಾನ್ ನಲ್ಲಿರುವ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮೋದಿ ಭಾಷಣ ಮಾಡುವ ನಿರೀಕ್ಷೆಯಿದೆ.
ನ್ಯೂಯಾರ್ಕ್ ನಲ್ಲಿರುವ ನಡೆಯಲಿರುವ ವಿಶ್ವಸಂಸ್ಥೆ  ಸಾಮಾನ್ಯ ಸಮಿತಿ ಸಭೆ ಬಳಿಕ ಚಿಕಾಗೋ ಹಾಗೂ ಹೊಸ್ಟಾನ್ ನಲ್ಲಿರುವ ಅನಿವಾಸಿ ಭಾರತೀಯರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಮೋದಿ ಅಮೆರಿಕಾ ಪ್ರವಾಸದ ಬಗ್ಗೆ ಅಧಿಕೃತ ಘೋಷಣೆ ಹೊರಬಿದಿಲ್ಲ. ಸೆಪ್ಟೆಂಬರ್ 23 ರಂದು ನಡೆಯಲಿರುವ ಹವಾಮಾನ ವೈಫರೀತ್ಯ ಕುರಿತ ವಿಶೇಷ ಸಭೆಯಲ್ಲಿ ಭಾಷಣ ಮಾಡಲು  ಹೊಸ್ಟನ್  ನಿಂದ ನ್ಯೂಯಾರ್ಕ್ ಗೆ ಮೋದಿ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರಧಾನಿ ಮೋದಿ ಭಾಷಣ ಮಾಡಲಿರುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಆದರೆ, ಸೆಪ್ಟೆಂಬರ್ 22 ರಂದು ಹೌಸ್ಟಾನ್ ನಲ್ಲಿ ಮೋದಿ ಮಾಡಲಿರುವ ಭಾಷಣಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ ಎಂದು ಅನಿವಾಸಿ ಸಮುದಾಯದ ಮುಖಂಡರು ಹೇಳಿದ್ದಾರೆ.
ಹೊಸ್ಟನ್  ಜಗತ್ತಿನ ಇಂಧನ ಮೂಲದ ಪ್ರಮುಖ ಕೇಂದ್ರವಾಗಿದೆ. ಇಂಧನ ಸುರಕ್ಷತೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖ ಆದ್ಯತೆಯಾಗಿದೆ. ಹೂಸ್ಟನ್ ಎನ್ ಆರ್ ಜಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದೆ. ಇದರಲ್ಲಿ 70 ಜನರು ಕೂರಬಹುದಾದ ಆಸನಗಳ ವ್ಯವಸ್ಥೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com