20 ವರ್ಷ ಹಳೆ ಕೊಲೆ ಪ್ರಕರಣ: ಯೋಗಿ ಆದಿತ್ಯನಾಥ್ ಗೆ ಕ್ಲೀನ್ ಚಿಟ್

20 ವರ್ಷಗಳ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ದಾಖಲಾಗಿದ್ದ ಕೊಲೆ ಪ್ರಕರಣವನ್ನು ವಿಶೇಷ ಕೋರ್ಟ್ ಬುಧವಾರ ವಜಾಗೊಳಿಸಿದೆ.

Published: 17th July 2019 12:00 PM  |   Last Updated: 17th July 2019 04:09 AM   |  A+A-


20-year-old murder case against Yogi Adityanath dismissed

ಯೋಗಿ ಆದಿತ್ಯನಾಥ್

Posted By : LSB LSB
Source : IANS
ಲಖನೌ: 20 ವರ್ಷಗಳ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ದಾಖಲಾಗಿದ್ದ ಕೊಲೆ ಪ್ರಕರಣವನ್ನು ವಿಶೇಷ ಕೋರ್ಟ್ ಬುಧವಾರ ವಜಾಗೊಳಿಸಿದೆ.

1999ರಲ್ಲಿ ಮುಖ್ಯ ಪೊಲೀಸ್ ಪೇದೆ ಸತ್ಯ ಪ್ರಕಾಶ್ ಯಾದವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಉತ್ತರ ಪ್ರದೇಶ ಸಿಎಂಗೆ ಕ್ಲೀನ್ ಚಿಟ್ ನೀಡಿದೆ.

ಸಮಾಜವಾದಿ ಪಕ್ಷದ ನಾಯಕ ತಲತ್ ಅಜಿಜ್ ಅವರ ಗನ್ ಮ್ಯಾನ್ ಆಗಿದ್ದ ಸತ್ಯ ಪ್ರಕಾಶ್ ಅವರು ಮಹಾರಾಜ್ ಗಂಜ್ ನಲ್ಲಿ ಸಮಾಜವಾದಿ ಪಕ್ಷ ಆಯೋಜಿಸಿದ್ದ ಪ್ರತಿಭಟನೆ ವೇಳೆ ಆದಿತ್ಯನಾಥ್ ಬೆಂಬಲಿಗರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದರು.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp