ಮುಂಬೈ ಕಟ್ಟಡ ಕುಸಿತ ದುರಂತ; ಸಂತ್ರಸ್ಥರಿಗೆ ಪರಿಹಾರ ಘೋಷಣೆ ಮಾಡಿದ ಸಿಎಂ ಫಡ್ನವಿಸ್

ಮುಂಬೈನ ಡೋಂಗ್ರಿಯಲ್ಲಿ ಸಂಭವಿಸಿರುವ ಕಟ್ಟಡ ಕುಸಿತ ದುರಂತದ ಸಂತ್ರಸ್ಥರಿದೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.
ಸಿಎಂ ದೇವೇಂದ್ರ ಫಡ್ನವಿಸ್
ಸಿಎಂ ದೇವೇಂದ್ರ ಫಡ್ನವಿಸ್
ಮುಂಬೈ: ಮುಂಬೈನ ಡೋಂಗ್ರಿಯಲ್ಲಿ ಸಂಭವಿಸಿರುವ ಕಟ್ಟಡ ಕುಸಿತ ದುರಂತದ ಸಂತ್ರಸ್ಥರಿದೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.
ಮುಂಬೈನ ಡೊಂಗ್ರಿ ಪ್ರದೇಶದ ಟಂಡೆಲ್ ಸ್ಟ್ರೀಟ್ ನಲ್ಲಿರುವ ಕೇಸರ್ಬಾಯಿ ಕಟ್ಟಡ ನಿನ್ನೆ ಬೆಳಗ್ಗೆ 11.40ರ ಸುಮಾರಿಗೆ ಕುಸಿದು ಬಿದ್ದಿದೆ. ಕಟ್ಟಡ ಕುಸಿಯುವ ವೇಳೆ ಸುಮಾರು 60ಕ್ಕೂ ಹೆಚ್ಚು ಮಂದಿ ಕಟ್ಟಡದೊಳಗೆ ಇದ್ದರು ಎನ್ನಲಾಗಿದೆ. ಈ ಪೈಕಿ ಈ ವರೆಗೂ 14 ಮಂದಿ ಸಾವನ್ನಪ್ಪಿದ್ದು, ಇನ್ನೂ ಅವಶೇಷಗಳಡಿಯಲ್ಲಿ 40ಕ್ಕೂ ಹೆಚ್ಟು ಮಂದಿ ಸಿಲುಕಿರುವ ಶಂಕೆ ಇದೆ. ಹೀಗಾಗಿ ಅಗ್ನಿ ಶಾಮಕ ದಳ ಹಾಗೂ ರಾಷ್ಟ್ಪೀಯ ವಿಪತ್ತು ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಏತನ್ಮಧ್ಯೆ ಘಟನೆ ಕುರಿತು ತನಿಖೆಗೆ ಆದೇಶಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು, ಸುಮಾರು ನೂರು ವರ್ಷಗಳ ಹಳೆಯ ಕಟ್ಟಡ ಇದಾಗಿದ್ದು, 2012ರಲ್ಲೇ ಕಟ್ಟಡ ತೆರವು ಗೊಳಿಸಲು ಆದೇಶ ನೀಡಲಾಗಿತ್ತು. ಅಲ್ಲದೆ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸಂಪೂರ್ಣ ತನಿಖೆ ನಡೆಸಲಾಗುವುದು. 15 ಕುಟುಂಬ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಸಂತ್ರಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಮತ್ತು ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಯೊಂದಿಗೆ ತಲಾ 50 ಸಾವಿರ ರೂ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com