ಸುಲಿಗೆ ಪ್ರಕರಣ: ಭೂಗತ ಪಾತಕಿ ದಾವೂದ್ ಸಹೋದರನ ಪುತ್ರ ಬಂಧನ

ಪ್ರಮುಖ ಬೆಳವಣಿಗೆಯಲ್ಲಿ ಮುಂಬೈ ಪೊಲೀಸರು ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರನ ಪುತ್ರನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Published: 18th July 2019 12:00 PM  |   Last Updated: 18th July 2019 02:40 AM   |  A+A-


Dawood Ibrahim's nephew arrested in Mumbai in extortion case: Sources

ಸಂಗ್ರಹ ಚಿತ್ರ

Posted By : SVN SVN
Source : PTI
ಮುಂಬೈ: ಪ್ರಮುಖ ಬೆಳವಣಿಗೆಯಲ್ಲಿ ಮುಂಬೈ ಪೊಲೀಸರು ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರನ ಪುತ್ರನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಂದು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದನ ಪುತ್ರ ರಿಜ್ವಾನ್ ಕಸ್ಕರ್ ನನ್ನು ಬಂಧಿಸಿದ್ದಾರೆ. 

ಮೂಲಗಳ ಪ್ರಕಾರ ಮುಂಬೈ ಪೊಲೀಸರ ಕ್ರೈಂ ಬ್ರ್ಯಾಂಚ್ ನ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆತ ದೇಶ ಬಿಟ್ಟು ದುಬೈ ತೆರಳುವ ಹುನ್ನಾರ ನಡೆಸಿದ್ದ ಎಂದು ತಿಳಿದುಬಂದಿದೆ.

ಆರೋಪಿ ರಿಜ್ವಾನ್ ಕಸ್ಕರ್ ಜನರನ್ನು ಹೆದರಿಸಿ ಅವರಿಂದ ಹಣ ಸುಲಿಗೆ ಮಾಡುತ್ತಿದ್ದ. ಈ ಸಂಬಂಧ ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಕಸ್ಕರ್ ವಿಮಾನ ನಿಲ್ದಾಣಕ್ಕೆ ಬರುವ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. 

ಈಗ್ಗೆ 2 ದಿನಗಳ ಹಿಂದಷ್ಟೇ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು, ದಾವೂದ್ ಭಂಟ ಅಹ್ಮದ್ ರಾಜಾ ವಧಾರಿಯಾ ಎಂಬಾತನನ್ನು ಬಂಧಿಸಿದ್ದರು. ಆತ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.
Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp