ಭಾರತದ ಕುಲಭೂಷಣ್ ಜಾದವ್ ಗಲ್ಲು ಶಿಕ್ಷೆ ರದ್ದು; ಐಸಿಜೆ ತೀರ್ಪಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸ್ವಾಗತ

ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ರದ್ದುಗೊಳಿಸಿದ್ದು, ನ್ಯಾಯಾಲಯದ ತೀರ್ಪಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ತೀರ್ಪನ್ನು ಸ್ವಾಗತಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಬೇಹುಗಾರಿಕೆ ನಡೆಸಿದ ಆರೋಪದ ಮೇರೆಗೆ ಪಾಕಿಸ್ತಾನ ಬಂಧಿಸಿದ್ದ ಭಾರತದ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ರದ್ದುಗೊಳಿಸಿದ್ದು, ನ್ಯಾಯಾಲಯದ ತೀರ್ಪಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ತೀರ್ಪನ್ನು ಸ್ವಾಗತಿಸಿದ್ದಾರೆ.
ಪಾಕಿಸ್ತಾನದಲ್ಲಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿದ್ದ ಭಾರತದ ಕುಲಭೂಷಣ್ ಯಾದವ್​​ರ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿದ ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪಿಗೆ ಭಾರತದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದ್ದು, ನ್ಯಾಯಾಲಯದ ತೀರ್ಪಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಗಣ್ಯರು ತೀರ್ಪನ್ನು ಸ್ವಾಗತಿಸಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ನಾಯಕರು, ಐಸಿಜೆ ತೀರ್ಪು ನ್ಯಾಯದ ಪರವಾಗಿದೆ ಎಂದು ಹೇಳಿದ್ದಾರೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇದು ನ್ಯಾಯ ಮತ್ತು ಸತ್ಯಕ್ಕೆ ಸಂದ ಜಯವಾಗಿದ್ದು, ಪ್ರಕರಣದಲ್ಲಿ ಜಾಧವ್ ಗೆ ಖಂಡಿತಾ ನ್ಯಾಯ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಐಸಿಜೆ ತೀರ್ಪಿನಿಂದಾಗಿ ಕುಲಭೂಷಣ್ ಜಾಧವ್ ಕುಟುಂಬಸ್ಥರಿಗೆ ನೆಮ್ಮದಿ ದೊರೆದಂತಾಗಿದೆ. ಪ್ರಕರಣದಲ್ಲಿ ಭಾರತಕ್ಕೆ ಖಂಡಿತಾ ನ್ಯಾಯ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಐಸಿಜೆ ತೀರ್ಪು ಸತ್ಯ ಮತ್ತು ಮಾನವೀಯತೆ ಘನತೆಗೆ ಸಂದ ಜಯವಾಗಿದೆ. ಮೋದಿ ಸರ್ಕಾರದ ರಾಜತಾಂತ್ರಿಕತೆಗೆ ಸಂದ ಜಯವಾಗಿದೆ ಎಂದು ಶಾ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com