ವಾರಣಾಸಿಯಿಂದ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಪ್ರಧಾನಿಗೆ ಹೈಕೋರ್ಟ್ ನೋಟಿಸ್

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಅಲಹಬಾದ್...
ನರೇಂದ್ರ ಮೋದಿ
ನರೇಂದ್ರ ಮೋದಿ
ಅಲಹಬಾದ್: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಅಲಹಬಾದ್ ಹೈಕೋರ್ಟ್, ಶುಕ್ರವಾರ ಪ್ರಧಾನಿಗೆ ನೋಟಿಸ್ ಜಾರಿ ಮಾಡಿದೆ.
ಮಾಜಿ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾಧವ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಕೆ.ಗುಪ್ತಾ ಅವರು, ಪ್ರಧಾನಿ ಮೋದಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಭ್ರಷ್ಟಾಚಾರ ಆರೋಪದ ಮೇಲೆ ತಾವು ಬಿಎಸ್ಎಫ್ ನಿಂದ ವಜಾಗೊಂಡಿಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ತೇಜ್ ಬಹದ್ದೂರ್ ವಿಫಲವಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ನಾಮಪತ್ತವನ್ನು ತಿರಸ್ಕರಿಸಲಾಗಿತ್ತು. ಆದರೆ ಚುನಾವಣಾ ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ತಮ್ಮ ನಾಮಪತ್ರ ತಿರಸ್ಕರಿಸಿದ್ದು, ಮೋದಿಯ ಆಯ್ಕೆಯನ್ನು ಅಮಾನ್ಯಗೊಳಿಸಬೇಕು ಎಂದು ಕೋರಿ ಕೋರ್ಟ್ ಮೊರೆ ಹೋಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com