ದೇಶಾದ್ಯಂತ 75ಕ್ಕೂ ಹೆಚ್ಚು ಇಂಜಿನಿಯರಿಂಗ್, ತಾಂತ್ರಿಕ ಕಾಲೇಜ್ ಗಳಿಗೆ ಬೀಗ

ದೇಶಾದ್ಯಂತ 75ಕ್ಕೂ ಇಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಈ ಪೈಕಿ ಉತ್ತರ ಪ್ರದೇಶದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ದೇಶಾದ್ಯಂತ 75ಕ್ಕೂ ಇಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಈ ಪೈಕಿ ಉತ್ತರ ಪ್ರದೇಶದ ಕಾಲೇಜ್ ಗಳೇ ಹೆಚ್ಚಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳಪೆ ಸಾಧನೆ ಮತ್ತು ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆ ಆಗುತ್ತಿರುವುದೇ ಈ ಕಾಲೇಜುಗಳನ್ನು ಮುಚ್ಚಲು ಕಾರಣ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಅಧಿಕಾರಿಗಳು ಹೇಳಿದ್ದಾರೆ.
ಇದುವರೆಗೆ 78 ತಾಂತ್ರಿಕ ಕಾಲೇಜ್ ಗಳನ್ನು ಮುಚ್ಚಲಾಗಿದೆ. 2018-19ನೇ ಸಾಲಿನಲ್ಲಿ 54 ಕಾಲೇಜ್ ಗಳನ್ನು ಮುಚ್ಚಲು ನಿರ್ಧರಿಸಲಾಗಿತ್ತು. 2017-18ರಲ್ಲಿ 106 ಕಾಲೇಜ್ ಗಳಿಗೆ ಬೀಗ ಹಾಕಲಾಗಿದೆ ಎಂದು ಎಐಸಿಟಿಇ ಅಧಿಕಾರಿಗಳು ತಿಳಿಸಿದ್ದಾರೆ.
ಈ ವರ್ಷ ಉತ್ತರ ಪ್ರದೇಶ 31 ಹಾಗೂ ಪಂಜಾಬ್ ನ 6 ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜ್ ಸೇರಿದಂತೆ 75 ಕಾಲೇಜ್ ಗಳನ್ನು ಮುಚ್ಚಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮೂಲಸೌಕರ್ಯ ಇಲ್ಲದ ಮತ್ತು ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿರುವ ಕಾಲೇಜುಗಳನ್ನು ಮುಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com