ಗುಂಪು ಹಲ್ಲೆ ತಡೆಗೆ ಕಾನೂನು: ಪ್ರಸಕ್ತ ಸಂಸತ್ ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ಹೆಚ್ಚುತ್ತಿರುವ ಗುಂಪು ಹಲ್ಲೆಗಳನ್ನು ನಿಯಂತ್ರಿಸುವುದಕ್ಕೆ ಕಾನೂನು ರೂಪಿಸಲು ಸುಪ್ರೀಂ ಕೋರ್ಟ್ ನಿರ್ದೆಶನ ನೀಡಿದ ಒಂದು ವರ್ಷದ ಬಳಿಕ ಈ ನಿಟ್ಟಿನಲ್ಲಿ ಕಾಯ್ದೆ ಮಂಡನೆಯಾಗುವ ಸುಳಿವು ದೊರೆತಿದೆ.

Published: 20th July 2019 12:00 PM  |   Last Updated: 20th July 2019 10:17 AM   |  A+A-


Centre to come up with anti-mob lynching law in this Parliament session

ಗುಂಪು ಹಲ್ಲೆ ತಡೆಗೆ ಕಾನೂನು: ಪ್ರಸಕ್ತ ಸಂಸತ್ ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

Posted By : SBV SBV
Source : IANS
ನವದೆಹಲಿ: ಹೆಚ್ಚುತ್ತಿರುವ ಗುಂಪು ಹಲ್ಲೆಗಳನ್ನು ನಿಯಂತ್ರಿಸುವುದಕ್ಕೆ ಕಾನೂನು ರೂಪಿಸಲು ಸುಪ್ರೀಂ ಕೋರ್ಟ್ ನಿರ್ದೆಶನ ನೀಡಿದ ಒಂದು ವರ್ಷದ ಬಳಿಕ ಈ ನಿಟ್ಟಿನಲ್ಲಿ ಕಾಯ್ದೆ ಮಂಡನೆಯಾಗುವ ಸುಳಿವು ದೊರೆತಿದೆ. 

ಸಂಸತ್ ನ ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡನೆ ಮಾಡಲಾಗುತ್ತದೆ ಎಂದು ಐಎಎನ್ಎಸ್ ವರದಿ ಪ್ರಕಟಿಸಿದೆ. 

ಸಾಮಾಜಿಕ ಜಾಲತಾಣಗಳಿಂದ ಹರಡುವ ವದಂತಿಗಳಿಂದ ಉಂಟಾಗುತ್ತಿರುವ ಗುಂಪು ಹಲ್ಲೆ, ಹಲ್ಲೆ ಪ್ರಕರಣಗಳನ್ನು ಪರಿಶೀಲಿಸಿ ಮಸೂದೆ ತಯಾರಿಸಲು ಗೃಹ ಸಚಿವಾಲಯ ಕಾನೂನು ಸಚಿವಾಲಯವನ್ನು ಕೇಳಿದೆ. 

ಗುಂಪುಹಲ್ಲೆ ತಡೆಗಟ್ಟುವುದಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಸಹ ಯಾವುದೇ ಕಾಯ್ದೆಯನ್ನೇಕೆ ಈ ವರೆಗೂ ರೂಪಿಸಿಲ್ಲ, ಸುಪ್ರೀಂ ಕೋರ್ಟ್ ನಿರ್ದೇಶನ ಬೇರೆ ಕಾಯ್ದೆಗಳನ್ನು ಜಾರಿಗೊಳಿಸುವುದಕ್ಕೆ ಅನ್ವಯವಾಗುತ್ತದೆಯೆಂದಾದರೆ ಇದಕ್ಕೆ ಏಕೆ ಅನ್ವಯವಾಗುವುದಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದರು. 
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp