ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಸ್ಥರನ್ನು ಭೇಟಿ ಮಾಡುವವರೆಗೆ ಈ ಜಾಗ ಬಿಟ್ಟು ಹೋಗುವುದಿಲ್ಲ: ಪ್ರಿಯಾಂಕಾ ಗಾಂಧಿ ಪಟ್ಟು

ಭೂಮಿ ಬಿಟ್ಟುಕೊಡಲು ನಿರಾಕರಿಸಿದ 10 ಆದಿವಾಸಿ ರೈತರ ಮೇಲೆ ಗುಂಡು ಹಾರಿಸಿದ ...

Published: 20th July 2019 12:00 PM  |   Last Updated: 20th July 2019 10:58 AM   |  A+A-


Congress leader Priyanka Gandhi Vadra was detained on 19 July 2019 while she was on her way to meet the kin of the Sonbhadra firing case victims. She spent the night at a guest house, refusing to go back.

ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಬೆಂಬಲಿಗರನ್ನು ವಶಕ್ಕೆ ತೆಗೆದುಕೊಂಡ ನಂತರ ಅತಿಥಿ ಗೃಹದಲ್ಲಿ ರಾತ್ರಿ ಕಳೆದ ಚಿತ್ರ

Posted By : SUD
Source : ANI
ಮಿರ್ಜಾಪುರ(ಉತ್ತರ ಪ್ರದೇಶ): ಭೂಮಿ  ಬಿಟ್ಟುಕೊಡಲು ನಿರಾಕರಿಸಿದ 10 ಆದಿವಾಸಿ ರೈತರ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಸ್ಥರು ಮತ್ತು ಗಾಯಗೊಂಡವರನ್ನು ಭೇಟಿ ಮಾಡಲು ಸೋನಭದ್ರಕ್ಕೆ ಆಗಮಿಸಿದ ವೇಳೆ ಪೊಲೀಸರು ತಮ್ಮನ್ನು ತಡೆದಿದ್ದಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅತಿಥಿ ಗೃಹದಲ್ಲಿ ರಾತ್ರಿಯಿಡೀ ಕಳೆದು ಪ್ರತಿಭಟನೆ ನಡೆಸಿದ್ದಾರೆ.

ನಿನ್ನೆ ನಾರಾಯಣಪುರದಲ್ಲಿ ಪ್ರಿಯಾಂಕಾ ವಾದ್ರಾ ಅವರನ್ನು ಪೊಲೀಸರು ತಡೆದಿದ್ದು ಇದನ್ನು ಪ್ರತಿಭಟಿಸಿ ಚುನಾರ್ ಅತಿಥಿ ಗೃಹದಲ್ಲಿ ಕಳೆದರು.

ಅತಿಥಿಗೃಹದಲ್ಲಿ ಹವಾ ನಿಯಂತ್ರಿತ ಕೊಠಡಿಯಿಲ್ಲ ಎಂದು ಹೇಳಿ ವಾರಣಾಸಿಗೆ ಕಳುಹಿಸಲು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳನ್ನು ಪ್ರಿಯಾಂಕಾ ಅವರನ್ನು ಭೇಟಿ ಮಾಡಿ ಮನವೊಲಿಸಲು ಪ್ರಯತ್ನಿಸಿ ವಿಫಲರಾದರು. ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಸ್ಥರನ್ನು ಭೇಟಿ ಮಾಡುವವರೆಗೆ ಸ್ಥಳ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ನಿನ್ನೆ ರಾತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಉಳಿದುಕೊಂಡಿದ್ದ ಅತಿಥಿ ಗೃಹದಲ್ಲಿ ರಾತ್ರಿ 10 ಗಂಟೆ ವೇಳೆಗೆ ವಿದ್ಯುತ್ ನಿಲುಗಡೆಯಾಯಿತು. ನಂತರ ಕಾಂಗ್ರೆಸ್ ಕಾರ್ಯಕರ್ತರೆಲ್ಲಾ ಒಟ್ಟು ಸೇರಿ ಹಣ ಸಂಗ್ರಹಿಸಿ ಬಾಡಿಗೆಗೆ ಜನರೇಟರ್ ತಂದರು. 
Stay up to date on all the latest ರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp