ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ 28 ವರ್ಷದ ಇಂಜಿನಿಯರ್ ಕಣ್ಣು!

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ನೀಡಿದ್ದು, ಯಾರನ್ನು ಆ ಸ್ಥಾನದಲ್ಲಿ ನೇಮಿಸಬೇಕೆಂಬ ಗೊಂದಲ ಮುಂದುವರೆದಿದೆ. ಈ ನಡುವೆ 28 ವರ್ಷದ ಇಂಜಿನಿಯರ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ನೀಡಿದ್ದು, ಯಾರನ್ನು ಆ ಸ್ಥಾನದಲ್ಲಿ ನೇಮಿಸಬೇಕೆಂಬ ಗೊಂದಲ ಮುಂದುವರೆದಿದೆ. ಈ ನಡುವೆ 28 ವರ್ಷದ ಇಂಜಿನಿಯರ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾನೆ. 
ಪುಣೆಯಲ್ಲಿರುವ ಬೆಂಗಳೂರು ಮೂಲದ ಉತ್ಪಾದನಾ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಯುವಕ ಗಜಾನಂದ್ ಹೊಸಲೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ವ್ಯಕ್ತಿ. 
"ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದರಿಂದ ಈಗ ಯಾರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂಬ ಗೊಂದಲ ಮೂಡಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾನು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಗಜಾನಂದ್ ಹೇಳಿದ್ದಾರೆ. ಕಾಂಗ್ರೆಸ್ ನ ಪುನರುಜ್ಜೀವನ ಈ ಹೊತ್ತಿನ ಅಗತ್ಯವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಕೇವಲ ವಯಸ್ಸಿನ ಆಧಾರದಲ್ಲಿ ಅಷ್ಟೇ ಅಲ್ಲದೇ ಚಿಂತನೆಯ ಶೈಲಿಯ ಆಧಾರದಲ್ಲಿಯೂ ಯುವ ನಾಯಕತ್ವದ ಅಗತ್ಯವಿದೆ" ಎನ್ನುತ್ತಾರೆ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಗಜಾನಂದ್ 
ಅಧ್ಯಕ್ಷ ಸ್ಥಾನ ಖಾಲಿ ಇರುವ ಕಾಂಗ್ರೆಸ್ ನ ಸದ್ಯದ ಪರಿಸ್ಥಿತಿಯಿಂದ ಕಾರ್ಯಕರ್ತರು ಪಕ್ಷದಿಂದ ದೂರ ಹೋಗುತ್ತಿದ್ದಾರೆ. ಪಕ್ಷದ ಸಂಪೂರ್ಣ ಕಾರ್ಯತಂತ್ರಕ್ಕೆ ಪೆಟ್ಟು ಬಿದ್ದಿದೆ ಎಂದೂ ಗಜಾನಂದ್ ಹೇಳಿದ್ದಾರೆ. 
ಗಜಾನಂದ್ ಗೆ ಈ ವರೆಗೂ  ಯಾವುದೇ ರಾಜಕೀಯ ಪಕ್ಷದಲ್ಲಿ ತೊಡಗಿಸಿಕೊಂಡ ಅನುಭವವಿಲ್ಲ. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯುವುದಾಗಿ ಗಜಾನಂದ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com