ಶೌಚಾಲಯ, ಚರಂಡಿಗಳನ್ನು ಸ್ವಚ್ಛಗೊಳಿಸಲು ಸಂಸದೆಯಾಗಿಲ್ಲ: ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್

ಪ್ರಧಾನಿ ನರೇಂದ್ರ ಮೋದಿ ದೇಶದ ಸ್ವಚ್ಛತೆಗಾಗಿ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಂಡು ಸ್ವಚ್ಛತೆಯೆಡೆಗೆ ಉತ್ತೇಜನ ನೀಡುತ್ತಿದ್ದಾರೆ.
ಸೆಹೋರ್: ಪ್ರಧಾನಿ ನರೇಂದ್ರ ಮೋದಿ ದೇಶದ ಸ್ವಚ್ಛತೆಗಾಗಿ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಂಡು ಸ್ವಚ್ಛತೆಯೆಡೆಗೆ ಉತ್ತೇಜನ ನೀಡುತ್ತಿದ್ದಾರೆ. ಆದರೆ ಅವರದ್ದೇ ಪಕ್ಷದ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ತಾವು ಸಂಸದೆಯಾಗಿ ಆಯ್ಕೆಯಾಗಿರುವುದು ಶೌಚಾಲ, ಚರಂಡಿಗಳನ್ನು ಸ್ವಚ್ಛಗೊಳಿಸುವುದಕ್ಕೆ ಅಲ್ಲ ಎಂದು ಹೇಳಿದ್ದಾರೆ. 
ಮಧ್ಯಪ್ರದೇಶದ ಸೆಹೋರ್ ಜಿಲ್ಲೆಗೆ ಭೇತಿ ನೀಡಿದ್ದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಬಳಿ ಸ್ಥಳಿಯ ಜನತೆ ತಮ್ಮ ಪ್ರದೇಶದಲ್ಲಿ ಸ್ವಚ್ಛತೆ ಹಾಗೂ  ನೈರ್ಮಲ್ಯದ ಕೊರತೆ ಎದುರಿಸುತ್ತಿರುವ ಬಗ್ಗೆ ದೂರು ನೀಡಿದ್ದಾರೆ. ದೂರನ್ನು ಆಲಿಸಿರುವ ಪ್ರಗ್ಯಾ ಸಿಂಗ್ ಠಾಕೂರ್ ತಮ್ಮ ಜವಾಬ್ದಾರಿಗಳನ್ನು ತಾವು ಪ್ರಮಾಣಿಕವಾಗಿ ನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಶೌಚಾಲಯ, ಚರಂಡಿಗಳನ್ನು ಸ್ವಚ್ಛಗೊಳಿಸುವುದು ತಮ್ಮ ಕೆಲಸವಲ್ಲ ಎಂದು ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ. 
2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಮಹಾತ್ಮಾ ಗಾಂಧಿ, ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com