ದೆಹಲಿ: ನಿಗಮ್ ಬೋದ್ ಘಾಟ್ ನಲ್ಲಿ ಶೀಲಾ ದೀಕ್ಷಿತ್ ಅಂತ್ಯಕ್ರಿಯೆ

ನಿನ್ನೆ ನಿಧನರಾದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ನಿಗಮ್ ಬೋದ್ ಘಾಟ್ ನಲ್ಲಿ ನಡೆಯಲಿದೆ.

Published: 21st July 2019 12:00 PM  |   Last Updated: 21st July 2019 10:35 AM   |  A+A-


Sheila dixit

ಶೀಲಾ ದೀಕ್ಷಿತ್

Posted By : ABN ABN
Source : The New Indian Express
ನವದೆಹಲಿ:  ನಿನ್ನೆ ನಿಧನರಾದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು  ನಿಗಮ್ ಬೋದ್ ಘಾಟ್ ನಲ್ಲಿ ನಡೆಯಲಿದೆ.

ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡೆ ಶೀಲಾ ದೀಕ್ಷಿತ್ (81) ಹೃದಯಾಘಾತದಿಂದ ನಿನ್ನೆ ಮೃತಪಟ್ಟಿದ್ದರು.

ನಿಜಾಮುದ್ದೀನ್ ಪೂರ್ವ ನಿವಾಸದಲ್ಲಿ ಶೀಲಾ ದೀಕ್ಷಿತ್ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದುಕೊಂಡರು.ಯ

ಶೀಲಾ ದೀಕ್ಷಿತ್ ನಿಧನದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಟ್ವೀಟರ್ ನಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡೆಯ ನಿಧನಕ್ಕೆ ದೇಶಾದ್ಯಂತ ತೀವ್ರ ಸಂತಾಪ ಹರಿದುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp