ಪ್ರಧಾನಿ, ಲೋಕಸಭಾ ಸ್ಪೀಕರ್ ಸೇರಿದಂತೆ ಗಣ್ಯರಿಂದ ಶೀಲಾ ದೀಕ್ಷಿತ್ ಪಾರ್ಥಿವ ಶರೀರದ ಅಂತಿಮ ದರ್ಶನ

ಹಲವಾರು ಪ್ರಮುಖ ರಾಜಕೀಯ ಮುಖಂಡರು ಶನಿವಾರ ನಿಧನರಾದ ದೆಹಲಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಮುಖಂಡೆ ಶೀಲಾ ದೀಕ್ಷಿತ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪಮಾಲೆ ಸಲ್ಲಿಸಿ ಗೌರವ

Published: 21st July 2019 12:00 PM  |   Last Updated: 21st July 2019 12:45 PM   |  A+A-


PM Modi, Sonia Gandhi among top politicians pay homage to Sheila Dikshit

ಪ್ರಧಾನಿ, ಲೋಕಸಭಾ ಸ್ಪೀಕರ್ ಸೇರಿದಂತೆ ಗಣ್ಯರಿಂದ ಶೀಲಾ ದೀಕ್ಷಿತ್ ಪಾರ್ಥಿವ ಶರೀರದ ಅಂತಿಮ ದರ್ಶನ

Posted By : SBV SBV
Source : UNI
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿ ಡಾ.ಮನ್‌ಮೋಹನ್ ಸಿಂಗ್ ಮತ್ತು ವಿವಿಧ ಪಕ್ಷಗಳ ಹಲವಾರು ಪ್ರಮುಖ ರಾಜಕೀಯ ಮುಖಂಡರು ಶನಿವಾರ ನಿಧನರಾದ ದೆಹಲಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕಿ ಶೀಲಾ ದೀಕ್ಷಿತ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪಮಾಲೆ ಸಲ್ಲಿಸಿ ಗೌರವ ಶ್ರದ್ಧಾಂಜಲಿ ಅರ್ಪಿಸಿದರು.

ನಿಜಾಮುದ್ದೀನ್ ಪೂರ್ವದಲ್ಲಿನ ಸಹೋದರಿ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಸತತ ಹದಿನೈದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ನೀಡಿದ ಕೊಡುಗೆಗೆ ಹೆಸರುವಾಸಿಯಾದ ಹಿರಿಯ ಕಾಂಗ್ರೆಸ್ ಮುಖಂಡೆ ದೀಕ್ಷಿತ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಶ್ರದ್ಧಾಂಜಲಿ ಸಲ್ಲಿಸಿದರು.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp