ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಿಎಂ ಶೀಲಾ ದೀಕ್ಷಿತ್ ಅಂತಿಮ ಸಂಸ್ಕಾರ!

ನಿನ್ನೆ ನಿಧನರಾದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ದೆಹಲಿಯಲ್ಲಿ ನೆರವೇರಿದೆ.

Published: 21st July 2019 12:00 PM  |   Last Updated: 21st July 2019 04:18 AM   |  A+A-


Posted By : SVN SVN
Source : Online Desk
ನವದೆಹಲಿ: ನಿನ್ನೆ ನಿಧನರಾದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ದೆಹಲಿಯಲ್ಲಿ ನೆರವೇರಿದೆ.

ನಿನ್ನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ 81 ವರ್ಷದ ಶೀಲಾ ದೀಕ್ಷಿತ್ ಸಾವನ್ನಪ್ಪಿದ್ದರು.  ಇಂದು ಮಧ್ಯಾಹ್ನ ದೆಹಲಿಯ ನಿಗಂ ಬೋಧ್​ ಘಾಟ್ ನಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ಈ ವೇಳೆ ಪ್ರಧಾನಿ ನರೇಂದ್ರ  ಮೋದಿ, ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​, ಡಿಸಿಎಂ ಮನೀಶ್​ ಸಿಸೋಡಿಯಾ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್​ ತಿವಾರಿ, ಸೇರಿದಂತೆ ಹಲವು ರಾಜಕಾರಣಿಗಳು, ಗಣ್ಯರು ಮತ್ತು ಆತ್ಮೀಯರು ಮೃತರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿದ್ದರು.

ಇದಕ್ಕೂ ಮೊದಲು ಕಾಂಗ್ರೆಸ್ ​ನ ಹಿರಿಯ ನಾಯಕರು ಶೀಲಾ ದೀಕ್ಷಿತ್​ ಅವರ ಮೃತದೇಹವನ್ನು ದೆಹಲಿಯ ನಿಜಾಮುದ್ದೀನ್​ ನಗರದಲ್ಲಿರುವ ಅವರ ಮನೆಗೆ ಕೊಂಡೊಯ್ದಿದ್ದರು. ಅವರ ಸ್ವಗೃಹದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿತ್ತು.  ಬಳಿಕ ಇಂದು ಬೆಳಗ್ಗೆ ಕಾಂಗ್ರೆಸ್​ ಮುಖ್ಯ ಕಚೇರಿಗೆ ಶೀಲಾ ದೀಕ್ಷಿತ್ ಅವರ ಪಾರ್ಥೀವ ಶರೀರ ಕೊಂಡೊಯ್ದು ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ದರ್ಶನಕ್ಕೆ ಅವಕಾ ಮಾಡಿಕೊಡಲಾಗಿತ್ತು. 

ಇನ್ನು ಶೀಲಾ ದೀಕ್ಷಿತ್ ನಿಧನದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎರಡು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp