ಶೌಚಾಲಯ, ಚರಂಡಿ ಸ್ವಚ್ಛಗೊಳಿಸಲು ಆಯ್ಕೆಯಾಗಿಲ್ಲ; ಸಾಧ್ವಿ ಪ್ರಜ್ಞಾಗೆ ಹೈಕಮಾಂಡ್ ಸಮನ್ಸ್

ಶೌಚಾಲಯ ಮತ್ತು ಚರಂಡಿಯನ್ನು ಸ್ವಚ್ಛಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಗೆ ಬಿಜೆಪಿ ಹೈಕಮಾಂಡ್ ಸಮನ್ಸ್ ನೀಡಿದೆ.
ಪ್ರಜ್ಞಾ ಸಿಂಗ್ ಠಾಕೂರ್
ಪ್ರಜ್ಞಾ ಸಿಂಗ್ ಠಾಕೂರ್
ನವದೆಹಲಿ: ಶೌಚಾಲಯ ಮತ್ತು ಚರಂಡಿಯನ್ನು ಸ್ವಚ್ಛಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಗೆ ಬಿಜೆಪಿ ಹೈಕಮಾಂಡ್ ಸಮನ್ಸ್ ನೀಡಿದೆ. 
ಪ್ರಜ್ಞಾ ಸಿಂಗ್ ಸೆಹೋರೆಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡುವ ವೇಳೆ ನಾನು ಚರಂಡಿ ಹಾಗೂ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಆಯ್ಕೆಯಾಗಿಲ್ಲ ಅರ್ಥ ಮಾಡಿಕೊಳ್ಳಿ. ನಾನು ಯಾವ ಕೆಲಸ ಮಾಡಲು ಚುನಾಯಿತಳಾಗಿದ್ದೇನೆ ಎನ್ನುವುದು ತಿಳಿದಿದೆ. ಆ ಕೆಲಸವನ್ನು ನಾನು ಮಾಡುತ್ತೇನೆ ಎಂದು ಆಕ್ರೋಶ ಭರಿತರಾಗಿ ಹೇಳಿದ್ದರು. 
ಈ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಇನ್ನು ಬಗ್ಗೆ ಹೈಕಮಾಂಡ್ ಸಹ ಗರಂ ಆಗಿದ್ದು ಸಮನ್ಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಜ್ಞಾ ದೆಹಲಿಗೆ ತೆರಳಿ ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ಬಿಜೆಪಿ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಮುಂದೆ ಹಾಜರಾಗಬೇಕಿದೆ. 
2008ರ ಮಲೇಂಗಾವ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಕಳೆದ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ವಿರುದ್ಧ ಜಯಭೇರಿ ಬಾರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com