ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ

ಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು.
ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸುವ ಮಸೂದೆ(ತಿದ್ದುಪಡಿ) ರಾಜ್ಯಸಭೆಯಲ್ಲಿ ಮಂಡನೆ
ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸುವ ಮಸೂದೆ(ತಿದ್ದುಪಡಿ) ರಾಜ್ಯಸಭೆಯಲ್ಲಿ ಮಂಡನೆ
ನವದೆಹಲಿ: ಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು.
ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ತಿದ್ದುಪಡಿ) ಮಸೂದೆ 2019 ಅನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಅವರು ರಾಜ್ಯಸಭೆಯಲ್ಲಿ ಮಂಡಿಸಿದರು.
ಬಳಿಕ ಮಾತನಾಡಿದ ಇರಾನಿ, ಲೈಂಗಿಕತೆಯ ದೃಶ್ಯ ಚಿತ್ರಣವನ್ನು ತೋರಿಸುವುದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಎಂದು ಮಸೂದೆ ಪರಿಗಣಿಸುತ್ತದೆ ಎಂದರು. ಇದು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸಲು ಸಹ ಅವಕಾಶ ನೀಡುತ್ತದೆ ಎಂದು ಅವರು ರಾಜ್ಯಸಭೆಗೆ ತಿಳಿಸಿದರು.
ಮಕ್ಕಳನ್ನು ಅಶ್ಲೀಲ ಉದ್ದೇಶಗಳಿಗಾಗಿ ಬಳಸುವುದಕ್ಕಾಗಿ ಜೀವಾವಧಿ ಶಿಕ್ಷೆ ಸೇರಿದಂತೆ ಕಠಿಣ ಶಿಕ್ಷೆಯನ್ನು ಮಸೂದೆ ಒದಗಿಸುತ್ತದೆ.
ಬಲವಾದ ದಂಡ ವಿಧಿಸುವಿಕೆಯಿಂದಾಗಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಅಪರಾಧಗಳಿಗೆ ತಡೆಯೊಡ್ಡುವ ಉದ್ದೇಶದಿಂದ ಈ ಕಾನೂನು ರೂಪಿಸಲಾಗಿದೆ ಎಂದು ಅವರು ಹೇಳಿದರು. ಮಸೂದೆಯನ್ನು ಈಗಾಗಲೇ ಲೋಕಸಭೆ ಅಂಗೀಕರಿಸಿದೆ. ರಾಜ್ಯಸಭೆಯಲ್ಲಿ ಮಸೂದೆ ಕುರಿತು ಚರ್ಚೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com