ಪ್ರತಿಪಕ್ಷಗಳ ವಿರೋಧದ ನಡುವೆಯೇ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರ

ದೇಶದಲ್ಲಿ ಸಾಕಷ್ಟು ಚರ್ಚೆಗೊಳಗಾಗಿದ್ದ ತ್ರಿವಳಿ ತಲಾಖ್‌ ತಿದ್ದುಪಡಿ ವಿಧೇಯಕವನ್ನು ಗುರುವಾರ ಲೋಕಸಭೆಯಲ್ಲಿ ಮೂರನೇ ಅಂಗೀಕರಿಸಲಾಗಿದೆ.
ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ
ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ
ನವದೆಹಲಿ: ದೇಶದಲ್ಲಿ ಸಾಕಷ್ಟು ಚರ್ಚೆಗೊಳಗಾಗಿದ್ದ ತ್ರಿವಳಿ ತಲಾಖ್‌ ತಿದ್ದುಪಡಿ ವಿಧೇಯಕವನ್ನು ಗುರುವಾರ ಲೋಕಸಭೆಯಲ್ಲಿ ಮೂರನೇ ಅಂಗೀಕರಿಸಲಾಗಿದೆ.
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಇಂದು ಲೋಕಸಭೆಯಲ್ಲಿ ತ್ರಿವಳಿ ತಲಾಖ್ ನಿಷೇಧಿಸುವ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019 ನ್ನು ಮಂಡಿಸಿದರು.
ಕಾಂಗ್ರಸ್, ಸಮಾಜವಾದಿ ಪಕ್ಷ, ಟಿ.ಎಂ.ಸಿ. ಮತ್ತು ಡಿ.ಎಂ.ಕೆ. ಪಕ್ಷಗಳು ಈ ಮಸೂದೆಗೆ ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದವು. ಆದರೆ ಸುದೀರ್ಘ ಚರ್ಚೆಯ ನಂತರ ತ್ರಿವಳಿ ತಲಾಖ್ ಮಸೂದೆಯನ್ನು ಅಂತಿಮವಾಗಿ ಮತಕ್ಕೆ ಹಾಕಿದಾಗ ಮಸೂದೆಯ ಪರ 303 ಮತ್ತು ವಿರುದ್ಧವಾಗಿ 82 ಮತಗಳು ಬಿದ್ದವು. ಈ ಮೂಲಕ ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಮಸೂದೆ ಲೋಕಸಭೆಯಲ್ಲಿ ಮೂರನೇ ಬಾರಿ ಅಂಗೀಕಾರಗೊಂಡಂತಾಗಿದೆ.
ಮಸೂದೆ ವಿರೋಧಿಸಿ ಕಾಂಗ್ರಸ್, ಸಮಾಜವಾದಿ ಪಕ್ಷ, ಟಿ.ಎಂ.ಸಿ. ಮತ್ತು ಡಿ.ಎಂ.ಕೆ. ಪಕ್ಷಗಳು ಸದನದಿಂದ ಹೊರ ನಡೆದವು.
ಈ ಮಸೂದೆ ಪ್ರಕಾರ, ತ್ರಿವಳಿ ತಲಾಖ್ ನೀಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಈ ಕಾನೂನಿನಲ್ಲಿ ಅವಕಾಶವಿದೆ.
ತ್ರಿವಳಿ ತಲಾಖ್ ಮಸೂದೆ ಈ ಹಿಂದೆ ಎರಡು ಬಾರಿ ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತು. ಆದರೆ ರಾಜ್ಯಸಭೆಯಲ್ಲಿ ಬಹುಮತವಿಲ್ಲದ ಕಾರಣ ಈ ಹಿಂದೆ ಎರಡು ಬಾರಿ ವಿಧೇಯಕ ಅಂಗೀಕಾರ ಆಗಿರಲಿಲ್ಲ. ಈಗಲೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತ ಇಲ್ಲ.
ತ್ರಿವಳಿ ತಲಾಖೆ ಮಸೂದೆಯಲ್ಲಿ ಕೆಲವು ಅಂಶಗಳು ಅಸಾಂವಿಧಾನಿಕವಾಗಿವೆ. ಈ ಕರಡು ಕಾನೂನನ್ನು ಇನ್ನಷ್ಟು ಆಳವಾಗಿ ಅವಲೋಕಿಸಬೇಕಾದ ಅಗತ್ಯವಿದೆ. ಹೀಗಾಗಿ ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆ ಒಳಗೊಂಡಿರುವ ಅಸಾಂವಿಧಾನಿಕ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕಿದೆ ಎಂದು ಈ ಬಾರಿಯೂ ವಿಧೇಯಕಕ್ಕೆ ಪ್ರಾದೇಶಿಕ ಪಕ್ಷಗಳು ಭಾರಿ ವಿರೋಧ ವ್ಯಕ್ತಪಡಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com