ಪೋಕ್ಸೊ ಪ್ರಕರಣಗಳ ವಿಚಾರಣೆಗೆ ಜಿಲ್ಲಾಮಟ್ಟದ ವಿಷೇಷ ನ್ಯಾಯಾಲಯ ಸ್ಥಾಪಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ದೇಶದಲ್ಲಿ ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ 100 ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇರುವ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ನವದೆಹಲಿ: ದೇಶದಲ್ಲಿ ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ 100 ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇರುವ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ತ್ರಿಸದಸ್ಯ ಪೀಠ, ವಿಶೇಷ ನ್ಯಾಯಾಲಯಗಳಿಗೆ ಕೇಂದ್ರ ಸರ್ಕಾರದಿಂದ ಅನುದಾನ ದೊರೆಯಲಿದ್ದು, ತ್ವರಿತ ವಿಚಾರಣೆಯ ಹಿನ್ನೆಲೆಯಲ್ಲಿ 60 ದಿನಗಳೊಳಗೆ ನ್ಯಾಯಾಲಯ ಸ್ಥಾಪಿಸುವಂತೆ ನಿರ್ದೇಶನ ನೀಡಿದೆ.
ಪೋಕ್ಸೋ ನ್ಯಾಯಾಲಯಗಳ ಸ್ಥಾಪನೆಗೆ ಅನುದಾನ ನೀಡುವ ಜೊತೆಗೆ, ವಕೀಲರು, ವಿಚಾರಣಾಧಿಕಾರಿಗಳನ್ನು ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿರುವ ನ್ಯಾಯಪೀಠ, ಈ ಸಂಬಂಧ ನಾಲ್ಕು ವಾರಗಳಲ್ಲಿ ಪ್ರಗತಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ. 
 ದೇಶದಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಸಂಬಂಧ ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಪೀಠ ಈ ಆದೇಶ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com