ಕಾರ್ಗಿಲ್ ವಿಜಯ ದಿವಸಕ್ಕೆ 20 ವರ್ಷ: ಹುತಾತ್ಮ ಯೋಧರ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್

ಭಾರತದ ಸೈನಿಕ ಸಾಮರ್ಥ್ಯಕ್ಕೆ ಕನ್ನಡಿಯಾಗಿದ್ದ ಕಾರ್ಗಿಲ್ ವಿಜಯೋತ್ಸವಕ್ಕೆ ಇಂದು 20 ವರ್ಷಗಳಾಗಿದ್ದು, ಇದೇ ಕಾರಣಕ್ಕೆ ರಾಷ್ಟ್ರುಪತಿ ರಾಮನಾಥ್ ಕೋವಿಂದ್ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ಶ್ಲಾಘಿಸಿದ್ದಾರೆ.

Published: 26th July 2019 12:00 PM  |   Last Updated: 26th July 2019 09:12 AM   |  A+A-


President Ramnath Kovind leads tributes to Kargil martyrs

ಸಂಗ್ರಹ ಚಿತ್ರ

Posted By : SVN SVN
Source : PTI
ನವದೆಹಲಿ: ಭಾರತದ ಸೈನಿಕ ಸಾಮರ್ಥ್ಯಕ್ಕೆ ಕನ್ನಡಿಯಾಗಿದ್ದ ಕಾರ್ಗಿಲ್ ವಿಜಯೋತ್ಸವಕ್ಕೆ ಇಂದು 20 ವರ್ಷಗಳಾಗಿದ್ದು, ಇದೇ ಕಾರಣಕ್ಕೆ ರಾಷ್ಟ್ರುಪತಿ ರಾಮನಾಥ್ ಕೋವಿಂದ್ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ಶ್ಲಾಘಿಸಿದ್ದಾರೆ.

ಟ್ವೀಟರ್ ನಲ್ಲಿ ಈ ಕುರಿತಂತೆ ಟ್ವೀಟ್ ಮಾಡಿರುವ ಕೋವಿಂದ್ ಅವರು, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮ್ಮ ನಮನಗಳು ಮತ್ತು ಅವರ ತ್ಯಾಗ ಮತ್ತು ಬಲಿದಾನಕ್ಕೆ ಇಡೀ ದೇಶ ಕೃತಜ್ಞರಾಗಿದ್ದೇವೆ. ಭಾರತವನ್ನು ರಕ್ಷಿಸಿದ ಸೈನಿಕ ಶೌರ್ಯಕ್ಕೆ ನಮ್ಮ ಸಲಾಂ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ದೇಶಾದ್ಯಂತ ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ವೀರ ಸೈನಿಕರ ತ್ಯಾಗ ಮತ್ತು ಬಲಿದಾನ ನೆನಪಿಸುವುದರ ಜೊತೆಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ 2 ದಿನ ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ.

ಇಂದು ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕಿಸ್ತಾನದ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ `ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp