ಕರ್ನಾಟಕ ಸಂಪುಟ ರಚನೆ ನಂತರ 'ಹೊಸ ಮಿಷನ್' ಆರಂಭ - ಕೈಲಾಶ್ ವಿಜಯ್ ವರ್ಗೀಯಾ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಸಂಪುಟ ರಚನೆ ಪ್ರಕ್ರಿಯೆ ಮುಗಿದ ನಂತರ ಹೊಸ ಮಿಷನ್ ಗೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಹೇಳಿದ್ದಾರೆ.
ಕೈಲಾಶ್ ವಿಜಯ್ ವರ್ಗಿಯಾ
ಕೈಲಾಶ್ ವಿಜಯ್ ವರ್ಗಿಯಾ
ಭೂಪಾಲ್ : ಮಧ್ಯಪ್ರದೇಶದಲ್ಲಿನ ರಾಜಕೀಯ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಸಂಪುಟ ರಚನೆ ಪ್ರಕ್ರಿಯೆ ಮುಗಿದ ನಂತರ ಹೊಸ ಮಿಷನ್ ಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ಮಧ್ಯ ಪ್ರದೇಶದಲ್ಲಿನ ಕಾಂಗ್ರೆಸ್ ಆಡಳಿತದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಮಲ್ ನಾಥ್ ನೇತೃತ್ವದ ಸರ್ಕಾರವನ್ನು ಬೀಳಿಸುವುದು ನಮ್ಮ ಉದ್ದೇಶವಲ್ಲಾ, ಆದರೆ, ಕಾಂಗ್ರೆಸ್ ಶಾಸಕರು ಅನಿಶ್ಚಿತತೆ ಹೊಂದಿದ್ದಾರೆ .ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಂಪುಟ ರಚನೆ ಬಳಿಕ ಹೊಸ ಮಿಷನ್  ಆರಂಭಿಸಲಾಗುವುದು ಎಂದರು.
ಕಾಂಗ್ರೆಸ್ ಶಾಸಕರಿಗೆ ಅವರ ನಾಯಕತ್ವದ ಬಗ್ಗೆ ವಿಶ್ವಾಸವಿಲ್ಲ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ಒಳ್ಳೇಯ ಅಭಿಪ್ರಾಯ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರ ಸ್ವಂತ ಕೆಲಸಗಳಿಂದಾಗಿ ಅಲ್ಲಿನ ಸರ್ಕಾರ ಹಾಗೂ ಕಾಂಗ್ರೆಸ್ ಪತನವಾಗಲಿದೆ ಎಂದು ಅವರು ಭವಿಷ್ಯ ನುಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com