ತಲಾಕ್ -ತಲಾಖ್- ತಲಾಖ್ ಹೇಳುವಂತಿಲ್ಲ- ರವಿಶಂಕರ್ ಪ್ರಸಾದ್

ಸಂಸತ್ತಿನಲ್ಲಿ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆ ಅಂಗೀಕಾರವಾಗಿರುವುದಕ್ಕೆ ಬಿಜೆಪಿ ನಾಯಕರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ .
ರವಿಶಂಕರ್ ಪ್ರಸಾದ್
ರವಿಶಂಕರ್ ಪ್ರಸಾದ್
ನವದೆಹಲಿ: ಸಂಸತ್ತಿನಲ್ಲಿ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆ ಅಂಗೀಕಾರವಾಗಿರುವುದಕ್ಕೆ ಬಿಜೆಪಿ ನಾಯಕರು ಅಪಾರ   ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ . 
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದೊಂದು ಅತ್ಯಂತ್ರ ಮಹತ್ವದ ದಿನವಾಗಿದೆ. ಮುಸ್ಲಿಂ ಮಹಿಳೆಯರಿಗೆ ಮುಕ್ತ ಸ್ವಾತಂತ್ರ್ಯ ಸಿಕ್ಕಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆಯುವ ಮೂಲಕ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. 
ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಬದ್ಧತೆಯನ್ನು ಪೂರ್ಣಗೊಳಿಸಿದ್ದಾರೆ  ತಲಾಖ್- ತಲಾಖ್- ತಲಾಖ್ ಎನ್ನುವಂತಿಲ್ಲ ಎಂದು ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ಮುಸ್ಲಿಂ ಮಹಿಳೆಯರ ಕಷ್ಟಗಳನ್ನು ಅರ್ಥಮಾಡಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಲಿಂಗ ಸಮಾನತೆಗಾಗಿ ತಮ್ಮ ಬದ್ಧತೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
 ಕಾಂಗ್ರೆಸ್ ಮತ್ತೆ ತಪ್ಪು ಮಾಡಿದೆ. ಮುಂದಿನ ದಿನಗಳಲ್ಲಿ ಜನರು ಕಾಂಗ್ರೆಸ್ ಅನ್ನು ಶಿಕ್ಷಿಸುತ್ತಾರೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವೀ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com