ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಭಾರತೀಯ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್ ಸೇನೆ ನಡೆಸಿದ ಅಪ್ರಚೋದಿತ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ರಾಜೌರಿ ಜಿಲ್ಲೆಯ ಸುಂದರ್​ಬಾನಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಭಾರತೀಯ ಯೋಧ ನಾಯಕ್ ಕೃಷನ್ ಲಾಲ್ ಅವರು ಹುತಾತ್ಮರಾಗಿದ್ದಾರೆ ಎಂದು ಸೇನಾ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ಅವರು ತಿಳಿಸಿದ್ದಾರೆ.
ತಂಗಧರ್​ ಮತ್ತು ಕೆರಾನ್​ ವಲಯಗಳಲ್ಲೂ ಕೂಡ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಪಾಕ್ ಸೇನೆಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.
ಬಾಲಾಕೋಟ್​ ದಾಳಿಯಾದಾಗಿನಿಂದ ಪಾಕ್​ ನಿರಂತರವಾಗಿ ಗಡಿಭಾಗಗಳಲ್ಲಿ ಗುಂಡಿನ ದಾಳಿ ನಡೆಸುತ್ತಿದೆ. ಸ್ಫೋಟಕಗಳನ್ನು ಎಸೆಯುತ್ತಿದೆ. ಭಾನುವಾರ ಪೂಂಚ್​ನ ಗಡಿನಿಯಂತ್ರಣಾ ರೇಖೆಯ ಬಳಿ ಇರುವ ಹಳ್ಳಿಗಳ ಬಳಿ ಪಾಕ್​ ನಡೆಸಿದ್ದ ಸಿಡಿಗುಂಡುಗಳ ಸ್ಫೋಟಕ್ಕೆ ಮಹಿಳೆ, 15 ದಿನದ ಹಸುಗೂಸು ಸೇರಿ ಮೂವರು ಗಾಯಗೊಂಡಿದ್ದರು. ಮಗು ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿತ್ತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com