ಜಮ್ಮು- ಕಾಶ್ಮೀರ: ಅನಂತ್ ನಾಗ್ ಬಳಿ ಎನ್ ಕೌಂಟರ್: ಜೈಷ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಮಟಾಷ್

ಅನಂತ್ ನಾಗ್ ಜಿಲ್ಲೆಯ ಬಿಜ್ ಬೆಹಾರಾ ಪ್ರದೇಶದಲ್ಲಿ ಇಂದು ನಡೆದ ಗುಂಡಿನ ಕಾರ್ಯಾಚರಣೆಯಲ್ಲಿ ಜೈಷ್ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಅನಂತ್ ನಾಗ್ ಜಿಲ್ಲೆಯ ಬಿಜ್ ಬೆಹಾರಾ ಪ್ರದೇಶದಲ್ಲಿ ಇಂದು ನಡೆದ ಗುಂಡಿನ ಕಾರ್ಯಾಚರಣೆಯಲ್ಲಿ ಜೈಷ್ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ  ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡ ಸಾಧನೆ. ಜೈಷ್ ಉಗ್ರ ಸಂಘಟನೆಯ ಮತ್ತೊಬ್ಬ ಕಮಾಂಡರ್ ಪಯಾಜ್ ಪಾಂಜೊ ಹಾಗೂ ಆತನ ಸ್ನೇಹಿತನನ್ನು ಹತ್ಯೆ ಮಾಡಲಾಗಿದೆ. ಜೂನ್ 2019 ರಂದು ಅನಂತ್ ನಾಗ್ ಜಿಲ್ಲೆಯ ಸಿಆರ್ ಪಿಎಫ್ ಕೇಂದ್ರದ ಮೇಲೆ ನಡೆದ ದಾಳಿಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದ. ಈ ದಾಳಿ ವೇಳೆಯಲ್ಲಿ ಐದು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಠಾಣಾ ಮುಖ್ಯಾಧಿಕಾರಿ ಅರ್ಷದ್ ಖಾನ್ ನಂತರ  ಹುತಾತ್ಮರಾಗಿದ್ದರು.
ದೊರೆತ ಖಚಿತ ಮಾಹಿತಿ ಮೇರೆಗೆ ಬಿಜ್ ಬೆಹಾರಾ ಪ್ರದೇಶದ ಕಾಟೂನಲ್ಲಿ ಭದ್ರತಾ ಪಡೆ ಹಾಗೂ ಪೊಲೀಸರಿಂದ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರನೊಬ್ಬ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ನಂತರ ಪ್ರತಿದಾಳಿ ನಡೆಸುವ ಮೂಲಕ ಸೂಕ್ತ ಪ್ರತ್ಯುತ್ತರ ನೀಡಲಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಗುಂಡಿನ ಕಾರ್ಯಾಚರಣೆ ವೇಳೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಎನ್ ಕೌಂಟರ್ ನಡೆದ ಸ್ಥಳದಿಂದ ಅವರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಆ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ಶಸಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com