ಬಿಜೆಪಿಯೊಂದಿಗಿನ ಸೈದ್ಧಾಂತಿಕ ಹೋರಾಟ ನಿತ್ಯ, ನಿರಂತರ: ಬಿಜೆಪಿ ಬೆವರಿಳಿಸಲು 52 ಸಂಸದರು ಸಾಕು- ರಾಹುಲ್

ಪ್ರತಿದಿನ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ಹೋರಾಟ ನಡೆಸುತ್ತಲೇ ಇರುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ...

Published: 01st June 2019 12:00 PM  |   Last Updated: 01st June 2019 02:48 AM   |  A+A-


Rahul Gandhi

ರಾಹುಲ್ ಗಾಂಧಿ

Posted By : SD
Source : The New Indian Express
ನವದೆಹಲಿ: ಪ್ರತಿದಿನ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ಹೋರಾಟ ನಡೆಸುತ್ತಲೇ ಇರುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯ  ನಂತರ ಮಾತನಾಡಿದ ಅವರು,  ಚುನಾವಣೆ ಸೋಲು ಬಿಜೆಪಿ ವಿರುದ್ಧದ ಸೈದ್ಧಾಂತಿಕ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,  ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್ ನ 52 ಸಂಸದರು ಸಾಕು ಎಂದು ಹೇಳಿದ್ದಾರೆ.

ಕಳೆದ ಬಾರಿ ನಾವು 44 ಸಂಸದರಿದ್ದೆವು, ಆಗಲೇ ಬಿಜೆಪಿ ವಿರುದ್ಧ ಸಾಕಷ್ಟು ಹೋರಾಟ ಮಾಡಿದ್ದೆವು, ಈಗ 54 ಸಂಸದರಿದ್ದೇವೆ. ಬಿಜೆಪಿಯೊಂದಿಗಿನ ಸೈದ್ಧಾಂತಿಕ ಹೋರಾಟ ನಿತ್ಯ ಮತ್ತು ನಿರಂತರ ಎಂದು ತಿಳಿಸಿದ್ದಾರೆ. 

ದೇಶದ ಜಾತ್ಯಾತೀತ ಸ್ವರೂಪವನ್ನು ರಕ್ಷಿಸುವ ಹೊಣೆ ಕಾಂಗ್ರೆಸ್ ಮೇಲಿದ್ದು, ಯಾವುದೇ ಕಾರಣಕ್ಕೂ ಪಕ್ಷ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವುದಿಲ್ಲ ಎಂದು ರಾಹುಲ್ ಸ್ಪಷ್ಟಪಡಿಸಿದರು.

ಸಂವಿಧಾನಕ್ಕಾಗಿ ಹೋರಾಟ ಮಾಡುವುದನ್ನು ಪ್ರತಿಯೊಬ್ಬ ಕಾಂಗ್ರೆಸ್ ಸಂಸದ ನೆನಪಿಟ್ಟುಕೊಳ್ಳಬೇಕು. ಚರ್ಮದ ಬಣ್ಣ ಅಥವಾ ವ್ಯಕ್ತಿಯ ಬಗ್ಗೆ ಗಮನ ಕೊಡದೇ ಸಂವಿಧಾನಕ್ಕಾಗಿ ಹೋರಾಡಬೇಕು ಎಂದು ಕಾಂಗ್ರೆಸ್ ಸಂಸದರಿಗೆ ರಾಹುಲ್ ಕರೆ ನೀಡಿದ್ದಾರೆ.
Stay up to date on all the latest ರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp