ಪಶ್ಚಿಮ ಬಂಗಾಳ: ದೀದಿಗೆ 10 ಲಕ್ಷ ಜೈ ಶ್ರೀ ರಾಮ್ ಅಂಚೆ ಕಾರ್ಡ್ಸ್ ರವಾನೆ- ಬಿಜೆಪಿ ಮುಖಂಡ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡ್ ಗಳನ್ನು ರವಾನಿಸಲಾಗುವುದು ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ  ಅಂಚೆ ಕಾರ್ಡ್ ಗಳನ್ನು ರವಾನಿಸಲಾಗುವುದು ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡ್ ಗಳನ್ನು ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ರವಾನಿಸಲು ನಿರ್ಧರಿಸಲಾಗಿದೆ ಎಂದು ಹೊಸದಾಗಿ ಆಯ್ಕೆಯಾಗಿರುವ ಶಾಸಕ ಅರ್ಜುನ್ ಸಿಂಗ್ ಹೇಳಿದ್ದಾರೆ.

ಮಾಜಿ ತೃಣಮೂಲ ಕಾಂಗ್ರೆಸ್ ಶಾಸಕರಾಗಿರುವ ಅರ್ಜುನ್ ಸಿಂಗ್  ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಯಾಗಿದ್ದರು.  ಟಿಎಂಸಿ ಸಭೆ ಹೊರಗಡೆ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಜೈ ಶ್ರೀ ರಾಮ್ ಎಂದು ಕೂಗಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಲಾಠಿ ಚಾರ್ಚ್ ನಡೆಸಿದ ನಂತರ ಅರ್ಜುನ್ ಸಿಂಗ್ ಈ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.

ಅರ್ಜುನ್ ಸಿಂಗ್ , ಹಾಗೂ ಬಿಜೆಪಿ ಮುಖಂಡ ಮುಕುಲ್ ರಾಯ್ ಮಗ ಸುಬ್ರಂಗ್ಶು ರಾಯ್   ಟಿಎಂಸಿ ತೊರೆದು ಬಿಜೆಪಿಗೆ ಸೇರಿದ ನಂತರ ಈ ಪ್ರದೇಶದಲ್ಲಿ ತುಂಬಾ ತೊಂದರೆ ನೀಡುತ್ತಿದ್ದಾರೆ ಎಂದು ಟಿಎಂಸಿ ಮುಖಂಡ ಜ್ಯೋತಿಪ್ರಿಯಾ ಮಲಿಕ್ ಹೇಳಿದ್ದಾರೆ.

ಮಲ್ಲಿಕ್ ಮತ್ತಿತರು ಸಭೆ ನಡೆಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದಾಗ ಪರಿಸ್ಥಿತಿ ಕೈ ಮೀರಿದ್ದು, ಪೊಲೀಸರು ಲಾಠಿ ಚಾರ್ಚ್ ನಡೆಸಿರುವುದಾಗಿ ತಿಳಿದುಬಂದಿದೆ.

ಬಂಗಾಳದಲ್ಲಿ ಇಂತಹ ಸಂಸ್ಕೃತಿಯನ್ನು ನೋಡಿರಲಿಲ್ಲ, ಇದು ಬಿಜೆಪಿಯ ಸಂಸ್ಕೃತಿಯಾಗಿದೆ ಎಂದು ಮಲ್ಲಿಕ್ ಹೇಳಿದ್ದು, ಪ್ರತಿಭಟನಾಕಾರರು ತಮ್ಮ ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com