ಯಾವುದೇ ಪ್ರದೇಶದ ಮೇಲೆ ಯಾವುದೇ ಭಾಷೆ ಹೇರುವ ಉದ್ದೇಶ ಇಲ್ಲ; ಮಾನವ ಸಂಪನ್ಮೂಲ ಸಚಿವಾಲಯ

ಯಾವುದೇ ಪ್ರದೇಶದ ಮೇಲೆ ಯಾವುದೇ ಭಾಷೆ ಹೇರುವ ಉದ್ದೇಶ ಇಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸ್ಪಷ್ಟಪಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಯಾವುದೇ ಪ್ರದೇಶದ ಮೇಲೆ ಯಾವುದೇ ಭಾಷೆ ಹೇರುವ ಉದ್ದೇಶ ಇಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸ್ಪಷ್ಟಪಡಿಸಿದೆ.
ದೇಶಾದ್ಯಂತ ಶಾಲೆಗಳಲ್ಲಿ ತ್ರಿಭಾಷಾ ಶಿಕ್ಷಣ ವ್ಯವಸ್ಥೆಯ ಜಾರಿಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ತಮಿಳುನಾಡು ಸರ್ಕಾರ ಹಾಗೂ ವಿವಿದ ವಿರೋಧ  ಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿರುವಂತೆಯೇ ಈ ಸಂಬಂಧ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸ್ಪಷ್ಟನೆ ನೀಡಿದೆ. 
ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ಡಾ ಕೆ ಕಸ್ತೂರಿ ರಂಗನ್ ಅವರ ನೇತೃತ್ವದ ಸಮಿತಿ ಸಿದ್ಧಪಡಿಸಿರುವ ಹೊಸ ಶಿಕ್ಷಣ ನೀತಿಯ ಕರಡಿನಲ್ಲಿ ಶಿಫಾರಸ್ಸು ಮಾಡಿರುವ ತ್ರಿಭಾಷಾ ವ್ಯವಸ್ಥೆಯ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸ್ಪಷ್ಟಪಡಿಸಿದೆ.
ಸಮಿತಿ ಸಲ್ಲಿಸಿರುವ ಕರಡು ನೀತಿಯಲ್ಲಿ ಈ ಶಿಫಾರಸ್ಸು ಸಲ್ಲಿಸಲಾಗಿದೆ, ಈ ಬಗ್ಗೆ ಸಾರ್ವಜನಿಕರ ಗಮನಕ್ಕೆ ತರಲಾಗುವುದು, ರಾಜ್ಯ ಸರ್ಕಾರಗಳ ಜತೆ ಸಮಾಲೋಚನೆ ನಡೆಸಿ, ಸಾರ್ವಜನಿಕರ ಪ್ರತಿಕ್ರಿಯೆ ಆಲಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಸಮಿತಿ ಸಲ್ಲಿಸಿರುವ ಕರಡು ಶಿಫಾರಸ್ಸು ಮಾತ್ರವಾಗಿದ್ದು, ಸರ್ಕಾರದ ನೀತಿಯಲ್ಲ, ಯಾವುದೇ ಪ್ರದೇಶದ ಮೇಲೆ ಯಾವುದೇ ನಿರ್ದಿಷ್ಟ ಭಾಷೆಯನ್ನು ಹೇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಹೇಳಿದ್ದಾರೆ ಎಂದು ಕೇಂದ್ರ ಎಚ್ ಆರ್ ಡಿ ಸಚಿವ ರಮೇಶ್ ಪೋಕ್ರಿಯಾಲ್ ನಿಷಾಂಕ್ ಸ್ಪಷ್ಟಪಡಿಸಿದ್ದಾರೆ
ಸಮಿತಿಯ ಶಿಪಾರಸ್ಸು ಕೇವಲ ಕರಡು ಮಾತ್ರ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ ಅಭಿಪ್ರಾಯ ಪರಿಗಣಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ, ನರೇಂದ್ರ ಮೋದಿ ಸರ್ಕಾರ ಎಲ್ಲ ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸುತ್ತಿದೆ, ಯಾವುದೇ ಭಾಷೆಯನ್ನು ಯಾರೊಬ್ಬರ ಮೇಲೆ ಹೇರುವ ಉದ್ದೇಶವಿಲ್ಲ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ದೇಕರ್ ಹೇಳಿದ್ದಾರೆ. ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿ ರಂಗನ್ ನೇತೃತ್ವದ ಸಮಿತಿ ಶುಕ್ರವಾರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಿಗೆ ಕರಡು ಶಿಕ್ಷಣ ನೀತಿಯನ್ನು ಸಲ್ಲಿಸಿದೆ. ಸಮಿತಿಯನ್ನು ಹಿಂದಿನ ಸರ್ಕಾರದಲ್ಲಿ ಹೆಚ್ ಆರ್ ಡಿ ಸಚಿವರಾಗಿದ್ದ ಪ್ರಕಾಶ್ ಜಾವ್ಡೇಕರ್ ರಚಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com