ಕಾಶ್ಮೀರ: ಶೋಪಿಯಾನ್‌ನಲ್ಲಿ ಗುಂಡಿನ ದಾಳಿ, ಓರ್ವ ಉಗ್ರ, ಕಾರ್ಯಕರ್ತ ಸಾವು

ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ರಾಷ್ಟ್ರೀಯ ರೈಫಲ್ಸ್‌ನ ಕ್ಷಿಪ್ರ ಕಾರ್ಯಾಚರಣಾ ಪಡೆ (ಕ್ಯೂಆರ್‌ಟಿ) ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ರಾಷ್ಟ್ರೀಯ ರೈಫಲ್ಸ್‌ನ ಕ್ಷಿಪ್ರ ಕಾರ್ಯಾಚರಣಾ ಪಡೆ (ಕ್ಯೂಆರ್‌ಟಿ) ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹಾಗೂ ಮತ್ತೋರ್ವ ತಳಮಟ್ಟದ ಕಾರ್ಯಕರ್ತ(ಒಜಿಡಬ್ಲ್ಯು) ಹತರಾಗಿದ್ದಾರೆ ಎಂದು ಸೋಮವಾರ ಅಧಿಕೃತ ಮೂಲಗಳು ತಿಳಿಸಿವೆ.
ವದಂತಿಗಳನ್ನು ಹರಡದಂತೆ ಮುಂಜಾಗೃತಾ ಕ್ರಮವಾಗಿ ಮೊಬೈಲ್ ಇಂಟರ್‌ನೆಟ್‌ ಸೇವೆಯನ್ನು ಕುಲ್ಗಾಮ್‌ನಲ್ಲಿ ಸ್ಥಗಿತಗೊಳಿಸಲಾಗಿದೆ.
ಉಗ್ರರು ಅಡಗಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಶೋಪಿಯಾನ್‌ನ ಮೂಲು ಚಿತ್ರಗಮ್ ಗ್ರಾಮದಲ್ಲಿ 44 ಆರ್ ಆರ್‌ನ ಕ್ಯೂಆರ್‌ಟಿ ನಾಕಾ ತಪಾಸಣೆ ಆರಂಭಿಸಿತ್ತು.
ಕಳೆದ ರಾತ್ರಿ 1 ಗಂಟೆ ಸುಮಾರಿಗೆ ವಾಹನವೊಂದು ಈ ರಸ್ತೆಯಲ್ಲಿ ಬಂದಾಗ ನಾಕಾ ಸಿಬ್ಬಂದಿ ಅದನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಆಗ ವಾಹನ ನಿಲ್ಲಿಸದೆ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ. ತಕ್ಷಣ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ.
ಬಳಿಕ ಎರಡು ಮೃತದೇಹಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ ಒಬ್ಬನನ್ನು ಫಿರ್ದೌಸ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಈತ ಒಂದು ತಿಂಗಳ ಹಿಂದೆಯಷ್ಟೇ ಉಗ್ರ ಸಂಘಟನೆಗೆ ಸೇರಿದ್ದ ಎಂದು ತಿಳಿದುಬಂದಿದೆ.
ಮತ್ತೊಬ್ಬನನ್ನು ಸಜ್ಜಾದ್ ಅಹ್ಮದ್‌ ಎಂದು ಗುರುತಿಸಲಾಗಿದ್ದು, ಈತ ವಾಹನ ಚಾಲಕನಾಗಿದ್ದ. ಈತ ಉಗ್ರ ಸಂಘಟನೆಗೆ ತಳಮಟ್ಟದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಆದಾಗ್ಯೂ, ಆತ ವಾಹನ ಚಾಲಕ, ಯಾವುದೇ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸಜ್ಜಾದ್ ಮತ್ತು ಫಿರ್ದೌಸ್ ಕುಲ್ಗಾಮ್ ನಿವಾಸಿಗಳ ಯಾವುದೇ ಪ್ರತಿಭಟನೆ ನಡೆಯದಂತೆ ತಡೆಯಲು ಸ್ಥಳದಲ್ಲಿ ಹೆಚ್ಚುವರಿ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com