ಉತ್ತರ ಪ್ರದೇಶದಲ್ಲಿ ಇಂದಿರಾ ಗಾಂಧಿ ಪ್ರತಿಮೆಗೆ ಬುರ್ಖಾ, ಕಾಂಗ್ರೆಸ್ ನಿಂದ ಪ್ರತಿಭಟನೆ

ಉತ್ತರ ಪ್ರದೇಶದ ಲಿಖಿಂಪುರ್ ಕೇರಿಯ ಗೋಲ ಪ್ರದೇಶದಲ್ಲಿರುವ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಪ್ರತಿಮೆಗೆ...

Published: 03rd June 2019 12:00 PM  |   Last Updated: 03rd June 2019 03:03 AM   |  A+A-


Miscreants cover Indira Gandhi's statue with burqa in UP, Congress stages protest

ಇಂದಿರಾ ಗಾಂಧಿ

Posted By : LSB LSB
Source : IANS
ಲಖಿಂಪುರ್ ಕೇರಿ: ಉತ್ತರ ಪ್ರದೇಶದ ಲಿಖಿಂಪುರ್ ಕೇರಿಯ ಗೋಲ ಪ್ರದೇಶದಲ್ಲಿರುವ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಪ್ರತಿಮೆಗೆ ದುಷ್ಕರ್ಮಿಗಳು ಬುರ್ಖಾ ಹಾಕಿದ ಘಟನೆ ಸೋಮವಾರ ನಡೆದಿದೆ.

ದುಷ್ಕರ್ಮಿಗಳ ಈ ಕೃತ್ಯದಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ, ಪ್ರಕರಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪ್ರತಿಮೆಗೆ ಹಾಕಿದ್ದ ಬುರ್ಖಾ ತೆಗೆದು, ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಶಾಂತಿ ಕದಡುವ ಉದ್ದೇಶದಿಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಆದರೆ ನಾವು ಶೀಘ್ರದಲ್ಲೇ ಆರೋಪಿಗಳನ್ನು ಗುರುತಿಸಿ, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp