ಪೌರತ್ವ ವಿವಾದ: ರಾಹುಲ್ ಗಾಂಧಿ ನೋಟಿಸ್ ಬಗ್ಗೆ ವಿವರ ನೀಡಲು ಕೇಂದ್ರ ಸರ್ಕಾರ ನಕಾರ

ಬ್ರಿಟಿಷ್ ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ನೋಟಿಸ್ ಬಗ್ಗೆ ಯಾವುದೇ ಮಾಹಿತಿ...

Published: 04th June 2019 12:00 PM  |   Last Updated: 04th June 2019 04:30 AM   |  A+A-


Rahul Gandhi citizenship row: MHA refuses to share details on notice to Congress chief

ರಾಹುಲ್ ಗಾಂಧಿ

Posted By : LSB LSB
Source : PTI
ನವದೆಹಲಿ: ಬ್ರಿಟಿಷ್ ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ನೋಟಿಸ್ ಬಗ್ಗೆ ಯಾವುದೇ ಮಾಹಿತಿ ನೀಡಲು ಕೇಂದ್ರ ಗೃಹ ಸಚಿವಾಲಯ ನಿರಾಕರಿಸಿದೆ.

ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವ ಕುರಿತು ಹಿರಿಯ ಬಿಜೆಪಿ ನಾಯಕ ಡಾ. ಸುಬ್ರಹ್ಮಣ್ಯಂ ಸ್ವಾಮಿ ಅವರ ದೂರಿನ ಮೇರೆಗೆ ಕೇಂದ್ರ ಗೃಹ ಸಚಿವಾಲಯ ಕಳೆದ ಏಪ್ರಿಲ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ನೋಟಿಸ್ ಜಾರಿ ಮಾಡಿದ್ದು, 15 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದೆ. 

ಈ ಮಧ್ಯೆ, ರಾಹುಲ್ ಗಾಂಧಿಗೆ ನೀಡಿದ ನೋಟಿಸ್ ಪ್ರತಿ ನೀಡುವಂತೆ ಮತ್ತು ನೋಟಿಸ್ ಗೆ ಅವರು ನೀಡಿದ ಉತ್ತರದ ವಿವರ ನೀಡುವಂತೆ ಕೋರಿ ಸಲ್ಲಿಸಿದ್ದ ಆರ್ ಟಿಐ ಅರ್ಜಿಗೆ, ಯಾವುದೇ ಮಾಹಿತಿ ನೀಡಲು ಕೇಂದ್ರ ಗೃಹ ಸಚಿವಾಲಯ ನಿರಾಕರಿಸಿದೆ. ಅಲ್ಲದೆ ನೋಟಿಸ್ ಕುರಿತು ಮಾಹಿತಿ ನೀಡುವುದರಿಂದ ಪ್ರಕರಣದ ತನಿಖೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಉತ್ತರಿಸಿದೆ.

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ ಅಫಿಡವಿಟ್ ನಲ್ಲಿ ರಾಹುಲ್ ಗಾಂಧಿ ತಮ್ಮ ಪೌರತ್ವ ವಿವಾದವನ್ನು ಮುಚ್ಚಿಟ್ಟಿದ್ದು, ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿ ಸುಬ್ರಹ್ಯಣ್ಯಂ ಸ್ವಾಮಿ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿದ್ದರು. 

ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಪಡೆದುಕೊಂಡಿದ್ದು, ಭಾರತದಲ್ಲಿ ದ್ವಿಪೌರತ್ವಕ್ಕೆ ಅವಕಾಶವಿಲ್ಲ. ಹೀಗಾಗಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಬೇಕು ಎಂದು ಸುಬ್ರಹ್ಮಣ್ಯಂ ಸ್ವಾಮಿ ಆಗ್ರಹಿಸಿದ್ದರು. 
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp