ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರು ವಿಂಗಡಣೆ ಪ್ರಸ್ತಾಪವಿಲ್ಲ: ಗೃಹ ಸಚಿವಾಲಯದ ಸ್ಪಷ್ಟನೆ

ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ರೀತಿಯ ಪ್ರಸ್ತಾಪ ತಮ್ಮ ಮುಂದೆ ಇಲ್ಲ ಎಂದು ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ರೀತಿಯ ಪ್ರಸ್ತಾಪ ತಮ್ಮ ಮುಂದೆ ಇಲ್ಲ ಎಂದು ಹೇಳಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ವಿಷಯ ಕುರಿತು  ಕೇಂದ್ರ ಸರ್ಕಾರ ಯಾವುದೇ ಚರ್ಚೆ ನಡೆಸಿಲ್ಲ,  ಈ ಕುರಿತ ಮಾಧ್ಯಮಗಳ ವರದಿಯನ್ನು ಕೇಂದ್ರ ಗೃಹ ಸಚಿವಾಲಯ ಸಾರಸಗಟಾಗಿ ತಳ್ಳಿಹಾಕಿದೆ. ಜಮ್ಮು ಕಾಶ್ಮೀರದಲ್ಲಿ  ಕ್ಷೇತ್ರಗಳ ಮರು ವಿಂಗಡಣೆಗೆ ವಿಶೇಷ   ಆಯೋಗ ರಚಿಸುವ  ಬಗ್ಗೆ  ಗೃಹ ಸಚಿವ ಅಮಿತ್ ಶಾ,  ಗೃಹ ಕಾರ್ಯದರ್ಶಿ ಹಾಗೂ ಹಿರಿಯ ಭದ್ರತಾ ಅಧಿಕಾರಿಗಳೊಂದಿಗೆ  ನಿನ್ನೆ ಸಭೆ ನಡೆಸಿ ಚರ್ಚಿಸಿದ್ದಾರೆ  ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಕಾಶ್ಮೀರದಲ್ಲಿ  ಉಗ್ರರ ಮಟ್ಟಹಾಕಲು ಕಠಿಣ ಕ್ರಮ
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರನ್ನು ಮಟ್ಟ ಹಾಕಲು ನಿರ್ಧರಿಸಿರುವ  ನೂತನ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿರುವ ಪ್ರಮುಖ 10 ಉಗ್ರರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಕೇಂದ್ರದಲ್ಲಿನ ಎನ್ ಡಿಎ ಸರ್ಕಾರ,  ಕಳೆದ ಐದು ವರ್ಷಗಳಲ್ಲಿ ಭಯೋತ್ಪಾದಕರ ವಿರುದ್ಧ ತೋರಿದ ಕಠಿಣ ಧೋರಣೆಗಳಿಂದಾಗಿ ಭಯೋತ್ಪಾದಕರ ಉಪಟಳ ಕೇವಲ ಈಗ ರಾಜ್ಯದ 4 ಜಿಲ್ಲೆಗಳಿಗೆ ಸೀಮಿತವಾಗಿದೆ. ಅಲ್ಲಿಂದಲೂ ಉಗ್ರರನ್ನು ಹೊರದಬ್ಬಲು ಗೃಹ ಸಚಿವ ಅಮಿತ್ ಶಾ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ, ಸೇನೆ ಹಾಗೂ ಕಾಶ್ಮೀರಿ ಪೊಲೀಸರ ಮೂಲಕ ಪ್ರಮುಖ 10 ಉಗ್ರರ ಮಾಹಿತಿ ಪಡೆದುಕೊಂಡಿರುವ ಗೃಹಸಚಿವ ಅಮಿತ್ ಶಾ, ಅವರನ್ನು ಮಟ್ಟಹಾಕಿ ಎಂದು ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com