ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ನಾಗರೀಕರ ಮೇಲೆ ಗುಂಡಿನ ದಾಳಿ, ಓರ್ವ ಮಹಿಳೆ ಸಾವು, ಬಾಲಕ ಗಂಭೀರ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಪುಲ್ವಾಮ ಜಿಲ್ಲೆಯ ನರ್ಬಲ್ ಕಾಕಾಪೋರಾದಲ್ಲಿ ಈ ಘಟನೆ ನಡೆದಿದ್ದು, ಘಟನೆ ನಿಗೀನಾ ಎಂಬ ಬಾಲಕಿ ಸಾವನ್ನಪ್ಪಿದ್ದಾಳೆ. ಉಗ್ರರು ನಾಗರೀಕರ ಮೇಲೆ ಗುಂಡಿನ ಸುರಿಮಳೆ ಗೈದಿದ್ದು, ಈ ವೇಳೆ ಓರ್ವ ಮಹಿಳೆ ಮತ್ತು ಬಾಲಕ ಸುಲ್ತಾನ್ ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಾರ್ಗ ಮಧ್ಯೆ ಮಹಿಳೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. 
ಪ್ರಸ್ತುತ ವಿಚಾರ ತಿಳಿದ ಕೂಡಲೇ ಸೈನಿಕರು ಮತ್ತು ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು ಅಷ್ಟು ಹೊತ್ತಿಗಾಗಲೇ ಉಗ್ರರು ಅಲ್ಲಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಪರಾರಿಯಾಗಿರುವ ಉಗ್ರರಿಗಾಗಿ ಶೋಧ ನಡೆಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com