ಗುರುವಾಯೂರು ಶ್ರೀಕೃಷ್ಣ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ: ತುಲಾಭಾರ ಸೇವೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಕೇರಳದ ಗುರುವಾಯೂರು ಶ್ರೀಕೃಷ್ಣ ...

Published: 08th June 2019 12:00 PM  |   Last Updated: 08th June 2019 12:52 PM   |  A+A-


PM Modi at Guruvayur temple

ಗುರುವಾಯೂರು ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ

Posted By : SUD
Source : PTI
ಗುರುವಾಯೂರು (ಕೇರಳ): ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. 

ಕೊಚ್ಚಿ ವಿಮಾನ ನಿಲ್ದಾಣಕ್ಕೆ ಕಳೆದ ರಾತ್ರಿ ಆಗಮಿಸಿದ ಪ್ರಧಾನಿ ಮೋದಿಯನ್ನು ಔಪಚಾರಿಕವಾಗಿ ಕೇರಳ ರಾಜ್ಯಪಾಲ ಪಿ ಸತಾಸಿವಂ, ಕೇಂದ್ರದ ನಾಯಕರು ಮತ್ತು ಕೇರಳ ಸರ್ಕಾರದ ವತಿಯಿಂದ ಸ್ವಾಗತಿಸಲಾಯಿತು. ಅಲ್ಲಿಂದ ನೌಕಾಪಡೆಯ ವಿಶೇಷ ಹೆಲಿಕಾಪ್ಟರ್ ನಲ್ಲಿ ಶ್ರೀಕೃಷ್ಣ ಕಾಲೇಜಿನ ಮೈದಾನದಲ್ಲಿ 9.50ರ ವೇಳೆಗೆ ಬಂದಿಳಿದರು.ಅಲ್ಲಿಂದ ನೇರವಾಗಿ ಗುರುವಾಯೂರು ದೇವಸ್ಥಾನಕ್ಕೆ ತೆರಳಿದರು. ಈ ಸಂದರ್ಭದಲ್ಲಿ ತೀವ್ರ ಭದ್ರತೆ ಒದಗಿಸಲಾಗಿತ್ತು.

ನಂತರ ದೇವಾಲಯದಲ್ಲಿ ಕಮಲದ ಹೂವಿನ ತುಲಾಭಾರ ಸೇವೆಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.
ಗುರುವಾಯೂರು ದೇವಸ್ಥಾನದಲ್ಲಿ ಸುಮಾರು ಒಂದು ಗಂಟೆ ಕಾಲ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನಿ ನಂತರ ಕೇರಳ ರಾಜ್ಯ ಬಿಜೆಪಿ ಸಮಿತಿ ಏರ್ಪಡಿಸಿರುವ ಅಭಿನಂದನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp