ಫರೀದಾಬಾದ್: ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ, 2 ವಿದ್ಯಾರ್ಥಿಗಳು ಸೇರಿ ಮೂವರು ಸಾವು

ಹರಿಯಾಣದ ಫರೀದಾಬಾದ್‌ ನ ಖಾಸಗಿ ಶಾಲೆಯೊಂದರಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಮೃತಪಟ್ಟಿದ್ದಾರೆ.

Published: 08th June 2019 12:00 PM  |   Last Updated: 08th June 2019 04:20 AM   |  A+A-


Three, including 2 students, killed in fire at private school in Faridabad

ಎಎನ್ ಡಿ ಕಾನ್ವೆಂಟ್

Posted By : LSB LSB
Source : ANI
ಫರೀದಾಬಾದ್‌: ಹರಿಯಾಣದ ಫರೀದಾಬಾದ್‌ ನ ಖಾಸಗಿ ಶಾಲೆಯೊಂದರಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಮೃತಪಟ್ಟಿದ್ದಾರೆ.

ಎಎನ್ ಡಿ ಕಾನ್ವೆಂಟ್ ಶಾಲೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಬಟ್ಟೆಗಳನ್ನು ಶೇಖರಿಸಿಡುತ್ತಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ಇಡೀ ಶಾಲೆಗೆ ಆವರಿಸಿಕೊಂಡಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಿದ್ದಾರೆ. ಘಟನೆ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ. ಆ ಕುರಿತು ತನಿಖೆ ನಡೆಸುವುದಾಗಿ ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳಷ್ಟೇ ಗುಜರಾತಿನ ಸೂರತ್‌ನ ಕೋಚಿಂಗ್ ಸೆಂಟರ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp