ಭೂಪಾಲ್: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ , ಚರಂಡಿಯಲ್ಲಿ ಮೃತದೇಹ ಪತ್ತೆ

ದುಷ್ಕರ್ಮಿಗಳು 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ. ಬಾಲಕಿಯ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಭೂಪಾಲ್ : ದುಷ್ಕರ್ಮಿಗಳು 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ. ಬಾಲಕಿಯ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ತಿಳಿಸಿದ್ದಾರೆ. 
ಕೆಲವೊಂದು ವಸ್ತು ಕೊಳ್ಳಲೆಂದು ಅಂಗಡಿಗಾಗಿ ಕಮಲಾ ನಗರದ ಮನೆಯಿಂದ ಕಳೆದ  ರಾತ್ರಿ 8 ಗಂಟೆ ಸುಮಾರಿಗೆ ಹೊರಗೆ ಬಂದಿದ್ದ ಆ ಬಾಲಕಿ ಮತ್ತೆ ಮನೆಗೆ ವಾಪಾಸ್ ಆಗಿರಲಿಲ್ಲ. ನಂತರ ಆಕೆಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಅದೇ ಬಡಾವಣೆಯಲ್ಲಿನ ಚರಂಡಿಯಲ್ಲಿ ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಮಗ್ರ ಮಾಹಿತಿಗಾಗಿ ಕಾಯುತ್ತಿದ್ದೇವೆ. ಒಬ್ಬ ಆರೋಪಿಯನ್ನು ಗುರುತಿಸಿದ್ದು, ಆತನಿಗಾಗಿ ಪೊಲೀಸರ ತಂಡವೊಂದನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಖಿಲ್ ಪಟೇಲ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಬಾಲಕಿ ನಾಪತ್ತೆ ಬಗ್ಗೆ ಶನಿವಾರ ರಾತ್ರಿ ಕಮಲಾ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿದ್ದು, ಬೆಳಗ್ಗೆ 5 ಗಂಟೆ ಸುಮಾರಿನಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. 
ದೂರಿನ ಬಗ್ಗೆ ಕ್ರಮ ಕೈಗೊಳ್ಳದ ಪೊಲೀಸ್ ಕಾನ್ಸ್ ಟೇಬಲ್ ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಇನ್ಸ್ ಪೆಕ್ಟರ್ ಜನರಲ್  ಯೋಗೇಶ್ ದೇಶ್ ಮುಖ್ ಸುದ್ದಿಗಾರರಿಗೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com