ಬಿಹಾರ ಬಿಟ್ಟು ಉಳಿದ ಕಡೆಗಳಲ್ಲಿ ಎನ್ ಡಿಎ ಭಾಗವಾಗದಿರಲು ಜೆಡಿಯು ನಿರ್ಧಾರ

ಬಿಹಾರ ಬಿಟ್ಟು ಉಳಿದ ಕಡೆಗಳಲ್ಲಿ ಎನ್ ಡಿಎ ಭಾಗವಾಗದಿರಲು ಜೆಡಿಯು ನಿರ್ಧರಿಸಿದೆ. ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಇಂದು ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಪಾಟ್ನಾ: ಬಿಹಾರ ಬಿಟ್ಟು ಉಳಿದ ಕಡೆಗಳಲ್ಲಿ ಎನ್ ಡಿಎ ಭಾಗವಾಗದಿರಲು ಜೆಡಿಯು ನಿರ್ಧರಿಸಿದೆ. ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಇಂದು ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 
ಇದರೊಂದಿಗೆ ಮುಂಬರುವ ಜಮ್ಮು- ಕಾಶ್ಮೀರ, ಜಾರ್ಖಂಡ್ , ಹರಿಯಾಣ ಹಾಗೂ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಜೆಡಿಯು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. 
ಜೆಡಿಯು ಹಾಗೂ ಎನ್ ಡಿಎ ನಡುವೆ ಮುಸುಕಿನ ಗುದ್ಜಾಟದ ವದಂತಿಯ ನಡುವೆ ಕಾರ್ಯಕಾರಿಣಿ ಸಭೆ ನಡೆಸಲಾಗಿದೆ. ಆದಾಗ್ಯೂ, ಎನ್ ಡಿಎ ಜೊತೆಗಿನ ಮೈತ್ರಿಯಲ್ಲಿ ಯಾವುದೇ  ಭಿನ್ನಾಭಿಪ್ರಾಯ ಇಲ್ಲ ಎಂದು ನಿತೀಶ್ ಕುಮಾರ್ ಶುಕ್ರವಾರ ಹೇಳಿಕೆ ನೀಡಿದ್ದರು.
ಕೇಂದ್ರ ಸಚಿವ ಸಂಪುಟದಲ್ಲಿ ನಾಮಕಾವಸ್ತೆಗೆ ಎಂಬಂತೆ ಕೇವಲ ಒಂದೇ ಒಂದು ಸ್ಥಾನ ನೀಡಿರುವುದರಿಂದ ಜೆಡಿಯು ಕೇಂದ್ರ ಸರ್ಕಾರದ ಭಾಗವಾಗಿರುವುದಿಲ್ಲ ಎಂದು ಮೇ 30 ರಂದು ನಿತೀಶ್ ಕುಮಾರ್ ಘೋಷಣೆ ಮಾಡಿದ್ದರು. ಸಂಪುಟದಲ್ಲಿ ನಮ್ಮ ಅವಶ್ಯಕತೆ ಇಲ್ಲ ಎಂದು ಅವರಿಗೆ ಮಾಹಿತಿ ನೀಡಿರುವುದಾಗಿ ನಿತೀಶ್ ಕುಮಾರ್ ಹೇಳಿದ್ದರು. 
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಯು ಹಾಗೂ ಎಲ್ ಜೆಪಿಯನ್ನೊಳಗೊಂಡ ಎನ್ ಡಿಎ ಮೈತ್ರಿಕೂಟ  ಬಿಹಾರದಲ್ಲಿ 39 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ನಿತೀಶ್ ಕುಮಾರ್ ಪಕ್ಷ 16 ಸ್ಥಾನಗಳನ್ನು ಪಡೆದುಕೊಂಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com